

ಚಾಮರಾಜನಗರ: ವಿಚಾರಣಾಧೀನ ಬಂಧಿಗಳ ಮನ ಪರಿವರ್ತನೆ ಮಾಡುವಲ್ಲಿ ಕಾರಾಗೃಹ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸೇವೆ ಅನನ್ಯವಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ತಿಳಿಸಿದರು.
ನಗರದ ಜಿಲ್ಲಾ ಕಾರಾಗೃಹದ ಆವರಣದಲ್ಲಿ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರಾಗೃಹ ಅಧಿಕಾರಿ ಮತ್ತು ಸಿಬ್ಬಂದಿಗಳ ಕುಟುಂಬ ಕಲ್ಯಾಣ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಕಾರಾಗೃಹ ಮಾದರಿಯಾಗಿದ್ದು, ಕಾರಾಗೃಹದಲ್ಲಿ ಉತ್ತಮ ವಾತಾವರಣದ ತೆ ಸಹದ್ಯೋಗಿ ಸ್ನೇಹಿ ವಾತಾವರಣವಿದೆ. ಅಧಿಕಾರಿ, ಸಿಬ್ಬಂದಿ ಬೇಧವಿಲ್ಲದೆ ವಿಚಾರಣಾಧೀನ ಬಂಧಿತರೆಲ್ಲರೂ ಒಂದೇ ಎನ್ನುವ ಮನೋಭಾವನೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಕಾರಾಗೃಹದ ಅಧೀಕ್ಷಕ ಎನ್.ಎಸ್.ಶಿವಕುಮಾರ್ ಮಾತನಾಡಿ, ಕಾರಾಗೃಹದ ಸಿಬ್ಬಂದಿಗಳ ಸೇವೆ ಅವಿರತವಾಗಿದೆ. ಈ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸರ್ಕಾರದಿಂದ ಗೌರವ, ಪ್ರಶಸ್ತಿಗಳು ಸಿಗಲಿವೆ. ಈ ನಿಟ್ಟಿನಲ್ಲಿ ಕಾರಾಗೃಹದ ಪ್ರತಿಯೊಬ್ಬ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಕೀಲ ಹರವೆ ಮಂಜು, ಜೈಲರ್ ಶಶಿಧರ್, ಸಹಾಯಕ ಜೈಲರ್ ಉತ್ತಮ್ ತಳ್ಳಿಮನೆ, ಮಾದೇಗೌಡ ಹಾಗೂ ಇತರರು ಹಾಜರಿದ್ದರು.