ಕಾರಾಗೃಹ ಸಿಬ್ಬಂದಿ ಮೇಲೆ ಹಲ್ಲೆ

Dharwad Central Jail
Published on

ಧಾರವಾಡ: ಇಲ್ಲಿನ ಕೇಂದ್ರ ಕಾರಾಗೃಹದ ಸಿಬ್ಬಂದಿ ಮೇಲೆ ಕೈದಿಯೊಬ್ಬ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರಾಗೃಹದ ಪ್ರಥಮ ದರ್ಜೆ ಸಹಾಯಕ ಕೆ.ಎಸ್. ವಾವರೆ ಹಲ್ಲೆಗೊಳಗಾದವರು. ಸಜಾ ಕೈದಿ ಅವಿನಾಶ ಬಾಜಿಲಕೇರಿ ಪ್ರಭಾಕರ ನಾಯಕ ಎಂಬಾತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮೇ 28ರಂದು ವಾವರೆ ಅವರೊಂದಿಗೆ ಸುಖಾಸುಮ್ಮನೆ ಜಗಳ ತೆಗೆದ ಕೈದಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಹಲ್ಲೆ ನಡೆಸಿದ್ದಾನೆ. ಈ ಕುರಿತು ವಾವರೆ ಮೇ 30ರಂದು ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಜೈಲು ಅಧೀಕ್ಷಕಿ ಅನಿತಾ ಆರ್., ‘ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಹೊರತು ಹಲ್ಲೆ ನಡೆದಿಲ್ಲ. ಜೈಲಿನಲ್ಲಿ ಯಾವುದೇ ರೀತಿಯಲ್ಲಿ ಗಲಾಟೆ ನಡೆಸಲು ಆಸ್ಪದವಿಲ್ಲ. ಈ ಕುರಿತು ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net