ಕಾರಿಗೆ ಬೆಂಕಿ, ಜನರು ಪಾರು

21 vikram 7
Published on

ಧಾರವಾಡ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಧಾರವಾಡ-ಗೋವಾ ರಸ್ತೆಯ ಹೊನ್ನಾಪುರ ಬಳಿ ಮಂಗಳವಾರ ಸಂಭವಿಸಿದೆ. ಹುಬ್ಬಳ್ಳಿಯ ಸಲೀಂ ಅಹ್ಮದ್ ಎಂಬುವವರಿಗೆ ಸೇರಿದ ಕಾರು ಸುಟ್ಟು ಭಸ್ಮವಾಗಿದೆ. ಹುಬ್ಬಳ್ಳಿಯಿಂದ ಗೋವಾಕ್ಕೆ ತೆರಳುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ. ಕಾರಿ ನಲ್ಲಿ ವಿದ್ಯುತ್ ಸ್ಪರ್ಶ ಉಂಟಾಗಿ ಹೊಗೆ ಬರುತ್ತಿದ್ದಂತೆ ಕಾರಿನಲ್ಲಿ ಸಲೀಂ ಅಹ್ಮದ್ ಹಾಗೂ ಇನ್ನೊಬ್ಬರು ಕಾರಿನಿಂದ ಕೆಳಗಿಳಿದಿದ್ದಾರೆ. ನಂತರದ ಕೆಲ ಹೊತ್ತಿನಲ್ಲೇ ಬೆಂಕಿ ಸಂಪೂರ್ಣ ಆವರಿಸಿ ಕಾರು ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net