ಕಾರು ಡಿಕ್ಕಿ ಹೊಡೆದು ವಿದ್ಯುತ್ ಕಂಬಗಳಿಗೆ ಹಾನಿ

ald car
ಬನ್ನೂರು ಗ್ರಾಮದ ರಾಜ್ಯ ಹೆದ್ದಾರಿ ಬದಿ ಕಾರು ಡಿಕ್ಕಿ ಹೊಡೆದಿದ್ದರಿಂದ ವಿದ್ಯುತ್ ಕಂಬಗಳು ವಾಲಿ ನಿಂತಿರುವುದು.
Published on

ಆಲ್ದೂರು: ಬನ್ನೂರು ಗ್ರಾಮದ ರಾಜ್ಯ ಹೆದ್ದಾರಿ-27ರ ತಿರುವಿನಲ್ಲಿ ವಿದ್ಯುತ್ ಕಂಬಗಳಿಗೆ ಮಂಗಳವಾರ ಮಧ್ಯಾಹ್ನ ಕಾರು ಡಿಕ್ಕಿ ಹೊಡೆದಿದ್ದು, ಎರಡು ವಿದ್ಯುತ್ ಕಂಬಗಳು ಮುರಿದು ಕಾರಿನ ಮೇಲೆ ವಾಲಿ ನಿಂತಿವೆ.

ಕಾರಿನ ಚಾಲಕ ಮದ್ಯಪಾನ ಮಾಡಿದ್ದರಿಂದ ಹಿಡಿತ ತಪ್ಪಿ ಕಾರನ್ನು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆಸಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬಗಳು ಮುರಿದು ಕಾರಿನ ಮೇಲೆ ವಾಲಿವೆ. ಅಪಘಾತದ ಸಂದರ್ಭದಲ್ಲಿ ವಿದ್ಯುತ್ ನಿಲುಗಡೆಯಾಗಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗ ಜಖಂಗೊಂಡಿದೆ.

ಇಬ್ಬರನ್ನೂ ಬನ್ನೂರು ಗ್ರಾಮಸ್ಥರು ಕಾರಿನಿಂದ ಇಳಿಸಿ ಪೊಲೀಸರು ಹಾಗೂ ಮೆಸ್ಕಾಂಗೆ ಮಾಹಿತಿ ನೀಡಿದರು. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net