ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

accident-15
Published on

ಹನೂರು: ಪಟ್ಟಣದ ಆರ್.ಎಸ್.ದೊಡ್ಡಿ ಸಮೀಪದಲ್ಲಿ ಶನಿವಾರ ರಾತ್ರಿ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದಾರೆ.

ಬಿಹಾರ ರಾಜ್ಯದ ಗೌತಮ್ (29) ಮೃತ ಯುವಕ. ಈತ ಹನೂರಿನ ಖಾಸಗಿ ಶಾಲೆಯೊಂದರ ಕಟ್ಟಡ ನಿರ್ಮಾಣದಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದನು. ಸಂಜೆ 7ರಲ್ಲಿ ಕಾರ್ಯನಿಮಿತ್ತ ಹನೂರಿನತ್ತ ನಡೆದುಕೊಂಡು ತೆರಳುತ್ತಿದ್ದನು. ಈ ವೇಳೆ ಕಾರು ಡಿಕ್ಕಿ ಹೊಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ತೀವ್ರ ಗಾಯಗೊಂಡಿದ್ದ ಗೌತಮ್‌ನನ್ನು ತುರ್ತು ವಾಹನದ ಮೂಲಕ ಕೊಳ್ಳೇಗಾಲದ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಗೆ ಕಳುಹಿಸಿ ಕೊಡಲಾಯಿತು. ಇಲ್ಲಿ ಪ್ರಥಮ ಚಿಕಿತ್ಸೆ ನೀಡಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ತುರ್ತು ವಾಹನದಲ್ಲಿ ಕಳುಹಿಸಲಾಗಿತ್ತು. ಆದರೆ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಕಾರನ್ನು ವಶಕ್ಕೆ ಪಡೆದಿರುವ ಹನೂರು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net