ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

Accident
Published on

ಹಾಸನ: ಅರಕಲಗೂಡು ತಾಲೂಕಿನ ರಾಮನಾಥಪುರ- ಬೆಟ್ಟದಪುರ ರಸ್ತೆಯಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲೇ ಮೃತಪಟ್ಟಿದ್ದಾರೆ.
ರಾಮನಾಥಪುರ ಹೋಬಳಿಯ ಮಲ್ಲಿನಾಥಪುರ ಗ್ರಾಮದ ಕಿರಣ್ ಕುಮಾರ್ (27) ಮೃತ ಯುವಕ.
ಭಾನುವಾರ ಮಧ್ಯಾಹ್ನ ಕಿರಣ್ ಕುಮಾರ್ ಅವರು ಗಂಗೂರು ಕಡೆಯಿಂದ ಮಲ್ಲರಾಜಪಟ್ಟಣ ಗ್ರಾಮದ ಕಡೆಗೆ ಹೋಗಲು ರಾಮನಾಥಪುರ- ಬೆಟ್ಟದಪುರ ರಸ್ತೆಯಲ್ಲಿ ಬೈಕಿನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಕಾರನ್ನು ಚಲಾಯಿಸಿಕೊಂಡು ಬಂದ ಚಾಲಕ, ಕಿರಣ್ ಕುಮಾರ್ ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಕಿರಣ್ ಕುಮಾರ್ ಅವರು ನೆಲಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಘಟನೆ ಸಂಬಂಧ ಮೃತರ ತಂದೆ ಸೋಮಯ್ಯ ಅವರು ಕೊಟ್ಟ ದೂರಿನ ಮೇರೆಗೆ ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net