ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

Published on

ಹಲಗೂರು: ಬೈಕ್ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದಾನೆ.

ಬಾಳೆಹೊನ್ನಿಗ ಗ್ರಾಮದ ಗೋಪಾಲ (52) ಮೃತ. ಭಾನುವಾರ ಸಂಜೆ ಕಾರ್ಯನಿಮಿತ್ತ ದಳವಾಯಿ ಕೋಡಿಹಳ್ಳಿ ಗ್ರಾಮಕ್ಕೆ ತೆರಳಿದ್ದ ಗೋಪಾಲ ಅವರು ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ-209ರ ಬಾಳೆ ಹೊನ್ನಿಗ ಗೇಟ್ ಬಳಿ ಹಲಗೂರು ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಗೋಪಾಲ ಅವರನ್ನು ಹಾರೋಹಳ್ಳಿ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೋಮವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ತೀವ್ರ ಗಾಯಗೊಂಡ ಬೈಕ್ ಹಿಂಬದಿ ಸವಾರ ವೆಂಕಟಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net