ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

Nataraju
Published on

ಚಾಮರಾಜನಗರ: ತಾಲೂಕಿನ ಅಮಚವಾಡಿ-ಹೊನ್ನಹಳ್ಳಿ ಮುಖ್ಯರಸ್ತೆಯಲ್ಲಿ ಬುಧವಾರ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ತಾಲೂಕಿನ ನಾಗವಳ್ಳಿ ಗ್ರಾಮದ ನಿವಾಸಿ, ಖಾಸಗಿ ೈನಾನ್ಸ್ ಉದ್ಯೋಗಿ ನಟರಾಜು (42) ಮೃತ. ಅಮಚವಾಡಿಯಿಂದ ಹೊನ್ನಹಳ್ಳಿ ಕಡೆಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಸವಾರ ನಟರಾಜುಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕಾರು ಮತ್ತು ಬೈಕ್ ವಶಪಡಿಸಿಕೊಂಡರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net