

ನಾಪೋಕ್ಲು: ಸಮೀಪದ ಬೊಳಿಬಾಣೆಯಲ್ಲಿ ಕಾರು ಮತ್ತು ಬೈಕ್ ನಡುವೆ ಗುರುವಾರ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ.
ಇಲ್ಲಿನ ಅಂಕುರ್ ಪಬ್ಲಿಕ್ ಶಾಲೆಯ ಶಿಕ್ಷಕರಾದ ಮಹೇಶ್, ವಿನೋದ್ ಹಾಗೂ ವಿದ್ಯಾರ್ಥಿಯೊಬ್ಬನಿಗೆ ಗಂಭೀರ ಗಾಯಗಳಾಗಿವೆ.
ನಾಪೋಕ್ಲು-ಮೂರ್ನಾಡು ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹೊದ್ದೂರು ಬಳಿಯ ಬೊಳಿಬಾಣೆ ಎಂಬಲ್ಲಿ ಅಪಘಾತ ನಡೆದಿದ್ದು, ತರಗತಿ ಮುಗಿಸಿ ನಾಪೋಕ್ಲುನಿಂದ ಮೂರ್ನಾಡು ಕಡೆಗೆ ಸಂಚರಿಸುತ್ತಿದ್ದ ಬೈಕ್‌ಗೆ ಮೂರ್ನಾಡಿನಿಂದ ನಾಪೋಕ್ಲುವಿನತ್ತ ಬರುತ್ತಿದ್ದ ಅರುಣ್ ಪಳಂಗಪ್ಪ ಅವರು ಚಾಲನೆ ಮಾಡುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಿದ್ದು ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.