ಕಾರು ಡಿಕ್ಕಿಹೊಡೆದು ಬೈಕ್ ಸವಾರ ಸಾವು

Lorry, collision, two, death,
Published on

ಹಾಸನ: ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಶನಿವಾರ ತಾಲ್ಲೂಕಿನ ಮುದ್ದನಹಳ್ಳಿ ಗ್ರಾಮದ ಬಳಿ ನಡೆದಿದೆ.

ತಾಲ್ಲೂಕು ದಂಡಿಗನಹಳ್ಳಿಯ ಲಕ್ಷ್ಮೀಶ (45) ಮೃತ ಬೈಕ್ ಸವಾರ.

ಲಕ್ಷ್ಮೀಶ ಬೈಕ್‌ನಲ್ಲಿ ಕತ್ತರಿಘಟ್ಟ ಗ್ರಾಮದಿಂದ ತಮ್ಮ ಗ್ರಾಮಕ್ಕೆ ಹೋಗಲು ಹಾಸನ-ಬೆಂಗಳೂರು ರಸ್ತೆಯ ಮುದ್ದನಹಳ್ಳಿ ಗ್ರಾಮದ ಹತ್ತಿರ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net