ಮಂಗಳೂರು: ಮಂಗಳೂರು ನಗರ ಸಿಸಿಬಿ ಪೊಲೀಸರು ಐಷಾರಾಮಿ ಕಾರು ಮಾರಾಟ ಮಾಡಿದ್ದಾರೆನ್ನಲಾದ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಮಾನತು ಮಾಡಿದ್ದಾರೆ.
ಸಿಸಿಬಿ ಪಿಎಸ್‌ಐ ಆಗಿದ್ದು, ಪ್ರಸ್ತುತ ಚಿಕ್ಕಮಗಳೂರಿನಲ್ಲಿ ಕರ್ತವ್ಯದಲ್ಲಿರುವ ಕಬ್ಬಳ್‌ರಾಜ್ ಹಾಗೂ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಸಿಸಿಬಿಯ ಇನ್ನಿಬ್ಬರು ಕಾನ್‌ಸ್ಟೇಬಲ್‌ಗಳು ಕೂಡಾ ಅಮಾನತು ಆಗುವ ಸಾಧ್ಯತೆ ಇದೆ.
ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಆಂತರಿಕ ವರದಿಯನ್ನು ಎಡಿಜಿಪಿ ಪ್ರತಾಪ್ ರೆಡ್ಡಿ ಅವರಿಗೆ ಸಲ್ಲಿಸಿದ್ದು, ಅದರ ಆಧಾರದ ಮೇಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಇಲಾಖೆ ಸಿಐಡಿ ತನಿಖೆಗೆ ವಹಿಸಿದೆ.