

ತುಮಕೂರು: ಕುಣಿಗಲ್ ರಸ್ತೆಯ ಮರಳೂರು ಕೆರೆ ಏರಿ ಮೇಲೆ ಮಂಗಳವಾರ ರಾತ್ರಿ ಸಂಭವಿಸಿದ ಬೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕುಣಿಗಲ್ ತಾಲೂಕು ಹುಲಿಯೂರುದುರ್ಗದ ಅರುಣï(43) ಮತ್ತು ಚೇತನ್(45) ಮೃತಪಟ್ಟವರು.
ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ಹೋಗುತ್ತಿದ್ದ ಕಾರು, ಎದುರಿಗೆ ಬಂದ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಅಪಘಾತವಾದಾಗ ವಾಹನ ಸಂಚಾರಕ್ಕೆ ಅಡೆತಡೆಯಾಗಿತ್ತು.
ಸಂಚಾರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಟ್ಟರು, ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.