ಕಾರ್ತಿಕ ಮಾಸದ ಪೂಜೆಗೆ ಹೆಚ್ಚು ಜನ ಬೇಡ

9CBP3 (1)
Published on

ಚಿಕ್ಕಬಳ್ಳಾಪುರ : ಕರೊನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಕಾರ್ತಿಕ ಮಾಸದ ಪೂಜೆಯ ಸಂದರ್ಭದಲ್ಲಿ ಪುರಾಣ ಪ್ರಸಿದ್ಧ ಭೋಗನಂದೀಶ್ವರ ದೇವಾಲಯದ ಒಳಾಂಗಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿಸಲು ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಆರ್.ಲತಾ ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಭೆಯಲ್ಲಿ ಮಾತನಾಡಿದರು.ಪ್ರತಿ ವರ್ಷ ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿರುವ ಭೋಗನಂದೀಶ್ವರ ದೇವಾಲಯದಲ್ಲಿ ಶಿವ ಪಾರ್ವತಿ, ಗಿರಿಜಾಂಭ, ಅರುಣಾಚಲೇಶ್ವರ ಸೇರಿ ಪ್ರಮುಖ ದೇವರಿಗೆ ವಿಶೇಷ ಪೂಜೆ ನಡೆಯುತ್ತದೆ. ಕಾರ್ತಿಕ ಸೋಮವಾರದಂದ 5 ಸಾವಿರ ಮಂದಿ ಆಗಮಿಸುವ ನಿರೀಕ್ಷೆ ಇದೆ. ಆದರೆ, ಪ್ರಸ್ತುತ ದಿನಗಳಲ್ಲಿ ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಜನದಟ್ಟಣೆ ಸೇರುವುದು ಸರಿಯಲ್ಲ. ಇದಕ್ಕೆ 300 ಕ್ಕಿಂತಲೂ ಕಡಿಮೆ ಸಂಖ್ಯೆಯಲ್ಲಿರಬೇಕಾಗುತ್ತದೆ ಎಂದರು.

ಆಲಯದಲ್ಲಿ ಜನಸಮೂಹದಿಂದ ಕರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪರಸ್ಪರ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಅಮರೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net