ಕಾರ್ಮಿಕ ಭವನಕ್ಕೆ ರೂ. 10 ಕೋಟಿ ಒದಗಿಸಿ

Karmik Minister- Suryakant Sadhure meet photo
Published on

ಬೀದರ್: ಜಿಲ್ಲಾ ಕೇಂದ್ರ ಬೀದರ್‍ನಲ್ಲಿ ಕಾರ್ಮಿಕರ ಭವನ, ಕಲ್ಯಾಣ ಮಂಟಪ ಹಾಗೂ ಕಾರ್ಮಿಕ ಇಲಾಖೆ ಕಚೇರಿ ನಿರ್ಮಾಣಕ್ಕೆ ರೂ. 10 ಕೋಟಿ ಅನುದಾನ ಒದಗಿಸಬೇಕು ಎಂದು ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾಸಂಘದ ಜಿಲ್ಲಾ ಅಧ್ಯಕ್ಷ ಸೂರ್ಯಕಾಂತ ಸಾಧುರೆ ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಅವರು ಈ ಕುರಿತು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಹಿಂದೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಹಾಗೂ ಅಂದಿನ ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಅವರಿಗೆ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರದೇಶದಲ್ಲಿ ಕಾರ್ಮಿಕರ ಭವನ ನಿರ್ಮಿಸಿಕೊಡಲು ಮನವಿ ಮಾಡಲಾಗಿತ್ತು ಎಂದು ತಿಳಿಸಿದರು.
ಜಿಲ್ಲೆಯಲ್ಲಿ 1.20 ಲಕ್ಷ ಕಾರ್ಮಿಕರು ಇದ್ದಾರೆ. ಇವರಲ್ಲಿ ಒಂದು ಲಕ್ಷ ನೋಂದಾಯಿತ ಕಾರ್ಮಿಕರಿದ್ದಾರೆ. ಕಾರ್ಮಿಕರ ವಿವಿಧ ಕಾರ್ಯಕ್ರಮಗಳಿಗಾಗಿ ಕಾರ್ಮಿಕರ ಭವನ, ಕಲ್ಯಾಣ ಮಂಟಪ ಹಾಗೂ ಕಚೇರಿ ನಿರ್ಮಾಣ ಬಹಳ ಅವಶ್ಯಕವಾಗಿದೆ ಎಂದು ಮನವರಿಕೆ ಮಾಡಿದರು. ಮದುವೆ, ಹೆರಿಗೆ, ಅಂತ್ಯ ಸಂಸ್ಕಾರ ಸಹಾಯ ಧನ ಸೇರಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net