ಕಾರ್ಮಿಕ ವಿಭಾಗದ ಪದಾಧಿಕಾರಿಗಳಿಂದ ಶಾಸಕರಿಗೆ ಸನ್ಮಾನ

05Rajesh5
Published on

ಚಾಮರಾಜನಗರ: ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದಿಂದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಇದೇ ವೇಳೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ದಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಸರ್ಕಾರದ ಯೋಜನೆಗಳ ಕುರಿತು ಕಾರ್ಮಿಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು. ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಎಸ್. ಮಹೇಶ್, ಕಾರ್ಯಾಧ್ಯಕ್ಷ ಪಿ.ಕುಮಾರ್ ನಾಯಕ, ನಾಗೇಂದ್ರಸ್ವಾಮಿ, ಉಪಾಧ್ಯಕ್ಷರಾದ ಚಿಕ್ಕಮಾದಶೆಟ್ಟಿ, ರವಿಗೌಡ, ನಗರಸಭಾ ಸದಸ್ಯ ಸ್ವಾಮಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net