

ರಾಯಚೂರು: ಕಾರ್ಮಿಕ ವಿರೋ ಸಂಹಿತೆಗಳನ್ನು ರದ್ದುಗೊಳಿಸಬೇಕು. ಕಟ್ಟಡ ಕಾರ್ಮಿಕರಿಗೆ ಮಾಸಿಕ 26 ಸಾವಿರ ರೂ. ಮಾಸಿಕ ವೇತನ ಮತ್ತು 10 ಸಾವಿರ ರೂ. ಪಿಂಚಣಿ ಖಾತ್ರಿ ಪಡಿಸುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ-1996 ಮತ್ತು ಸೆಸ್ ಕಾಯ್ದೆ-1996 ಹಾಗೂ ಅಂತಾರಾಜ್ಯ ವಲಸೆ ಕಾರ್ಮಿಕರ ಕಾಯ್ದೆ 1979ನ್ನು ಬಲಪಡಿಸುವಂತೆ ಒತ್ತಾಯಿಸಿದರು.
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 12 ಸಾವಿರ ಕೋಟಿ ರೂ. ಸಂಗ್ರಹವಾಗಿದ್ದು, ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಕಾರ್ಮಿಕರಿಗೆ ಸೌಲಭ್ಯಗಳು ಸಿಗದಂತಾಗಿದೆ. ಕೂಡಲೇ ಶೈಕ್ಷಣಿಕ ಅರ್ಜಿಗಳಿಗೆ ಸಹಾಯಧನ ಬಿಡುಗಡೆ ಮಾಡಬೇಕು. ಕಾರ್ಡ್ ನವೀಕರಣಕ್ಕೆ ವೇತನ ಚೀಟಿ, ಹಾಜರಾತಿ ಪಟ್ಟಿ ಕಡ್ಡಾಯ ವಾಪಸ್ ಪಡೆಯಬೇಕು.
ನಕಲಿ ಕಾರ್ಡುಗಳನ್ನು ಮಾಡುತ್ತಿರುವ ಗ್ರಾಮ ಒನ್, ಸೇವಾ ಸಿಂಧು ಕೇಂದ್ರಗಳಲ್ಲಿ ಕಾರ್ಡ್ ನೋಂದಣಿ, ನವೀಕರಣ ನಿಲ್ಲಿಸಿ, ಹೊಸ ತಂತ್ರಾಂಶದ ಮೂಲಕ ಕಾರ್ಡ್ ಪಡೆಯುವಂತೆ ಮಾಡಬೇಕು. ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಬೇಕು. ಜೀವಿತಾವ ಪ್ರಮಾಣಪತ್ರವನ್ನು ಕಂದಾಯ ಇಲಾಖೆ ಬದಲಾಗಿ ಕಾರ್ಮಿಕ ಇಲಾಖೆಯಿಂದ ನೀಡಬೇಕು.
ನಗರದಲ್ಲಿ ಇಎಸ್‌ಐ ಆಸ್ಪತ್ರೆ ಆರಂಭಿಸಬೇಕು. ಕಾರ್ಮಿಕರಿಗೆ ಮನೆ ನಿರ್ಮಾಣ 5 ಲಕ್ಷ ರೂ. ಸಹಾಯಧನ ನೀಡಬೇಕು. ಸ್ಲಂ ಬೋರ್ಡ್‌ಗೆ ನೀಡಿದ ಹಣವನ್ನು ವಾಪಸ್ ಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಮಿತಿ ಸಂಚಾಲಕ ವೀರಣ್ಣ ಹೊಸೂರು, ಪದಾಕಾರಿಗಳಾದ ಭೀಮೇಶ, ರಂಗಪ್ಪ ಅಸ್ಕಿಹಾಳ, ಗೋವಿಂದ, ತಿಮ್ಮಪ್ಪ ಕಡಗೋಲ, ತಿಮ್ಮಪ್ಪಸ್ವಾಮಿ, ಎಸ್.ಮಹಾದೇವಪ್ಪ, ವೀರನಗೌಡ, ಮಾರುತಿ, ವೀರೇಶ, ನಾಗರಾಜ ಪಾಲ್ಗೊಂಡಿದ್ದರು.