ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದು ಮಾಡಿ

09Rajesh5
Published on

ಚಾಮರಾಜನಗರ: ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಆಶಾ, ಅಂಗನವಾಡಿ, ಬಿಸಿಯೂಟ ಮತ್ತು ಇತರ ಸ್ಕೀಂ ವರ್ಕರ್‌ಗಳ ಸೇವೆಗಳನ್ನು ಕಾಯಂಗೊಳಿಸಬೇಕೆಂದು ಒತ್ತಾಯಿಸಿದರು. ಖಾಸಗಿಕರಣ ಬೇಡ ಮತ್ತು ಎನ್‌ಎಂಪಿಯನ್ನು ರದ್ದು ಮಾಡಿ. ನರೇಗಾಗೆ ಹೆಚ್ಚಿನ ಅನುದಾನ ನೀಡಬೇಕು. ಉದ್ಯೋಗ ಖಾತ್ರೆ ಯೋಜನೆಯನ್ನು ನಗರ ಪ್ರದೇಶಕ್ಕೂ ರವಾನೆ ಮಾಡಬೇಕು. ಸೇವಾ ನಿವೃತ್ತಿ ಹೊಂದುವವರಿಗೆ ಪಶ್ಚಿಮ ಬಂಗಾಳದ ಸರ್ಕಾರದಂತೆ 5 ಲಕ್ಷ ರೂ. ಇಡಿಗಂಟು ನೀಡಬೇಕು. ಕಾರ್ಮಿಕರ ಸೇವೆಯನ್ನು ಕಾಯಂ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಸಮಿತಿ ಸದಸ್ಯೆ ಉಮಾದೇವಿ, ಜಿಲ್ಲಾಧ್ಯಕ್ಷೆ ಕವಿತಾ, ಕಾರ್ಯದರ್ಶಿ ಚೆನ್ನಂಜಮ್ಮ, ಸುಜಾತಾ, ಸುಲೋಚನಾ, ಮಂಜುಳಾ, ಭಾಗ್ಯ, ಜಯಲಕ್ಷ್ಮಿ, ಸುವರ್ಣಾ, ರಂಗಮ್ಮ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net