ಕಾರ್ಮಿಕರ ಆರೋಗ್ಯ ತಪಾಸಣೆ

5kglphoto-1
Published on


ಚಾಮರಾಜನಗರ:

ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಪಂ ಕಚೇರಿ ಆವರಣದಲ್ಲಿ ಸೋಮವಾರ ಆರೋಗ್ಯ ಅಮೃತ ಯೋಜನೆಯಡಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.


ಶಿಬಿರಕ್ಕೆ ಚಾಲನೆ ನೀಡಿದ ಗ್ರಾಪಂ ಅಧ್ಯಕ್ಷ ಎಸ್.ಸಿದ್ದಶೆಟ್ಟಿ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಆರೋಗ್ಯ ಅಮೃತ ಅಭಿಯಾನ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಸಾಮಾನ್ಯ ಕಾಯಿಲೆಗೆ ಔಷಧೋಪಚಾರ ನೀಡಲಾಗುತ್ತದೆ. ಹೆಚ್ಚಿನ ಸಮಸ್ಯೆಗಳಿದ್ದದರೆ ಹೆಚ್ಚಿನ ಚಿಕಿತ್ಸೆಗೆ ಸಂಬಂಧಿಸಿದ ಆರೋಗ್ಯ ಆಸ್ಪತ್ರೆಗೆ ಕಳುಹಿಸಲು ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.


ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾಜೇಶ್ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಯುವ ಪಂಚಾಯಿತಿ ವ್ಯಾಪ್ತಿಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರವನ್ನು ಸರ್ಕಾರ ಕಲ್ಪಿಸಿದೆ. ಇದರ ಸದುಪಯೋಗ ಪಡೆದು ಕೊಳ್ಳಬೇಕಾಗಿ ಸಲಹೆ ನೀಡಿದರು.


ಮುಳ್ಳೂರು ಗ್ರಾಪಂ ಉಪಾಧ್ಯಕ್ಷೆ ಎಂ.ಚಂದ್ರಕಲಾ, ಸದಸ್ಯರಾದ ಕಮಲಮ್ಮ, ನಂಜುಂಡಸ್ವಾಮಿ, ಮಹದೇವಮ್ಮ, ಚಂದ್ರಬಾಬು, ಶೇಖರ, ಮಹದೇವಮ್ಮ, ಮಹೇಶ್, ದೊರೆರಾಜು, ಶಾಂತಮ್ಮ, ಗೋಪಾಲ, ಶಶಿಕಲಾ, ರತಿ, ರುಕ್ಕುರಮ್ಯ, ಚಿಲಕವಾಡಿ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದ ರಾಜು, ಜ್ಯೋತಿ, ಹರಿಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net