ಕಾರ್ಮಿಕರ ಮಕ್ಕಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ 2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಫ್ರೌಢಶಾಲೆಯಿಂದ ಸ್ನಾತಕೋತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಬಹುದು. ಕಾರ್ಮಿಕರ ಮಾಸಿಕ ವೇತನವು 35 ಸಾವಿರ ರೂ. ಮೀರಬಾರದು. ಒಂದು ಕುಟುಂಬದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಶೇ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೇ. 45ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‌ಸೈಟ್ ನಲ್ಲಿ ಡಿಸೆಂಬರ್ 31ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ:48, 1ನೇ ಮತ್ತು 2ನೇ ಮಹಡಿ, ಮತ್ತಿಕೆರೆ ಮುಖ್ಯ ರಸ್ತೆ, ಯಶ್ವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂ.ಸಂ. 080-23475188 ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net