ಕಾರ್ಯಕರ್ತರ ಗೆಲುವಿಗೆ ಮುಖಂಡರು ಶ್ರಮಿಸಲಿ

08-12jvg02.
Published on

ಜೇವರ್ಗಿ: ಪಟ್ಟಣದ ಮಹಿಬೂಬ್ ಪಂಕ್ಷನ್ ಹಾಲ್ನಲ್ಲಿ ಮಂಗಳವಾರ ಬಿಜೆಪಿ ತಾಲ್ಲೂಕು ಘಟಕದಿಂದ ಗ್ರಾಪಂ ಚುನಾವಣೆ ನಿಮಿತ್ತ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
ಸಮಾರಂಭ ಉದ್ಘಾಟಿಸಿದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಭದ್ರ ಬುನಾದಿಯಾಗಲಿರುವ ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರ ಗೆಲುವಿಗೆ ಪಕ್ಷದ ಮುಖಂಡರು ಹಗಲಿರುಳು ಶ್ರಮಿಸಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಸಾಧನೆಗಳೇ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯಥರ್ಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ತಾಲೂಕು ಘಟಕದ ಅಧ್ಯಕ್ಷ ಭೀಮರಾವ ಗುಜಗೊಂಡ ಸೇರಿ ನೂತನ ಬಿಜೆಪಿ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು.ಬಿಜೆಪಿಯ ಹಿರಿಯ ಮುಖಂಡರಾದ ರಮೇಶಬಾಬು ವಕೀಲ, ಮಲ್ಲಿನಾಥಗೌಡ ಯಲಗೋಡ, ಎಂ.ಬಿ.ಪಾಟೀಲ ಹರವಾಳ, ಜಿಪಂ ಮಾಜಿ ಸದಸ್ಯರಾದ ಶೋಬಾ ಬಾಣಿ, ಅಶೋಕ ಸಾಹು ಗೋಗಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹಳ್ಳೆಪ್ಪಚಾರ್ಯ ಜೋಶಿ, ಪುರಸಭೆ ಅಧ್ಯಕ್ಷೆ ಕಸ್ತೂರಿಬಾಯಿ ಸಾಹೇಬಗೌಡ ಕಲ್ಲಾ, ಸಾಯಬಣ್ಣ ದೊಡ್ಡಮನಿ, ಜಿಪಂ ಸದಸ್ಯ ರೇವಣಸಿದ್ದಪ್ಪ ಸಂಕಾಲಿ, ತಾಪಂ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ಆಂದೋಲಾ, ಸಿದ್ದಣ್ಣ ಹೂಗಾರ, ತಾಪಂ ಉಪಾಧ್ಯಕ್ಷ ಗುರುಲಿಂಗಪ್ಪ ದೊಡ್ಡಮನಿ, ಡಿಸಿಸಿ ಬ್ಯಾಂಕ್ ನಿದರ್ೇಶಕ ನಿಂಗಣ್ಣ ದೊಡ್ಡಮನಿ, ಮಹಾಂತಗೌಡ ಚನ್ನೂರ, ಮಹಾದೇವಪ್ಪ ದೇಸಾಯಿ, ದೇವಿಂದ್ರಪ್ಪಗೌಡ ಮಾಗಣಗೇರಿ, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net