ಕಾರ್ಯಕಾರಿ ಸಮಿತಿ ಸದಸ್ಯತ್ವ ಚುನಾವಣೆಗೆ ನಾಮಪತ್ರ ಸಲ್ಲಿಕೆ

28-11-rama-teachers
Published on

ರಾಮನಗರ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಮನಗರ ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯತ್ವ ಚುನಾವಣೆಗೆ ಸರ್ಕಾರಿ ನೌಕರರ ಸಂಘದ ರಾಮನಗರ ಜಿಲ್ಲಾ ಉಪಾಧ್ಯಕ್ಷ ಸಂಜಿವೇಗೌಡ ಶನಿವಾರ ಉಮೇದುವಾರಿಕೆ ಸಲ್ಲಿಸಿದರು.

ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿನ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಹಾಗೂ ರಾಮನಗರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್.ಮರಿಗೌಡ ಅವರಿಗೆ ನಾಮಪತ್ರ ಸಲ್ಲಿಸಿ ಮಾತನಾಡಿದ ಸಂಜೇವೆಗೌಡ ತಾಲೂಕಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಮಿತಿ ಸದಸ್ಯನಾಗಿ ತಾಲೂಕಿನಾದ್ಯಂತ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯ ದೊರಕಿಸಲು ಶ್ರಮಿಸಿದ್ದೇನೆ. ನಗರದ ಎಂ.ಜಿ. ರಸ್ತೆಯಲ್ಲಿ ಶಿಕ್ಷಕರ ಸಂಘದಿಂದ ನಿರ್ಮಾಣ ಮಾಡಲಾಗಿರುವ ಗುರು ಭವನವನ್ನು ನವೀಕರಣಗೊಳಿಸಿ ಉನ್ನತ ದರ್ಜೆಗೆ ಏರಿಸಲಾಗುವುದು ಎಂದರು.

ಚುನಾವಣೆ ನಡೆಯಲ್ಲ ? : ಪ್ರಾಥಮಿಕ ಶಾಲಾ ಶಿಕ್ಷಕರು ಚುನಾವಣೆ ಮೂಡ್‌ನಲ್ಲಿ ಇರುವಾಗಲೇ ಚುನಾವಣೆಯನ್ನು ಮುಂದಿನ ಆದೇಶದವರೆಗೆ ನಡೆಸದಂತೆ ಸಂಘಗಳ ಜಿಲ್ಲಾ ನೋಂದಾಣಿಕಾರಿ, 4ನೇ ವಲಯ ಬೆಂಗಳೂರು ನಗರ ಜಿಲ್ಲೆ ಇವರು ಆದೇಶ ಹೊರಡಿಸಿದ್ದಾರೆ. ನ.27ರ ಸಂಜೆ ಆದೇಶ ಹೊರಬಿದ್ದಿದ್ದು, ಈ ಸಂಬಂಧ ಆಯಾ ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕಾರ ಮಾಡುತ್ತಿದ್ದರೂ ಸೋಮವಾರದಂದು ಚುನಾವಣೆ ಮುಂದೂಡಿಕೆ ಸಂಬಂಧ ಆದೇಶ ಹೊರಡಿಸುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net