ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿ

22ydg02
Published on

ಯಾದಗಿರಿ: ಸರಕಾರದ ನಿರ್ದೇಶನದಂತೆ ಸೆ.25 ರಂದು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಗರದಲ್ಲಿ ಹಮ್ಮಿಕೊಂಡಿದ್ದು, ಇದರ ಯಶಸ್ವಿಗೆ ಅಧಿಕಾರಿ ವರ್ಗ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ನಿದರ್ೇಶನ ನೀಡಿದರು.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಜನತಾ ದರ್ಶನ ನಿಮಿತ್ತ ಕರೆದಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ನಗರದ ಡಾ.ಬಾಬು ಜಗಜೀವನರಾಮ್ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳಗ್ಗೆ 9ರಿಂದ ಸಾರ್ವಜನಿಕರ ಕುಂದುಕೊರತೆಯ ಅರ್ಜಿಗಳನ್ನು ವಿವಿಧ ಇಲಾಖೆ ಅಧಿಕಾರಿಗಳಿಂದ ಸ್ವೀಕರಿಸಲಾಗುತ್ತದೆ. ನಂತರ ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಸ್ಥಳದಲ್ಲಿಯೇ ವಿಲೇವಾರಿ ಮಾಡಬೇಕಾದ ಅರ್ಜಿಗಳ ಪರಿಶೀಲನೆ ನಡೆಸಲಾಗುತ್ತದೆ ಎಂದರು.

ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್ಎಸ್) ಪೋರ್ಟಲ್ದಲ್ಲಿ ನೋಂದಣಿ ಮಾಡಬೇಕಾಗುತ್ತದೆ. ಅದರಂತೆ ನಿಗದಿತ ಸಮಯದೊಳಗೆ ಇತ್ಯರ್ಥ ಪಡಿಸಬೇಕಾಗುತ್ತದೆ. ಅಧಿಕಾರಿಗಳು ಅಂದು ಸ್ವೀಕರಿಸುವ ಅರ್ಜಿಗಳ ಮೇಲೆ ಅವಶ್ಯಕ ಕ್ರಮಕೈಗೊಳ್ಳುವ ಬಗ್ಗೆ ಪೂರ್ವಭಾವಿಯಾಗಿ ಸಿದ್ಧತೆಯಲ್ಲಿ ಇರಬೇಕು. ಹಲವು ವರ್ಷಗಳಿಂದ ಇತ್ಯರ್ಥಗೊಳ್ಳದೇ ಬಾಕಿ ಉಳಿದಿರುವ ಅಜರ್ಿಗಳ ವಿಲೇವಾರಿ ಕುರಿತು ಗಮನ ನೀಡಿಬೇಕು ಎಂದು ಸೂಚನೆ ನೀಡಿದರು.

ಆಯುಷ್ಮಾನ್ ಭಾರತ ಯೋಜನೆಯಡಿಯ ಅರ್ಜಿಗಳ ಸ್ವೀಕರಿಸುವ ವಿಧಾನ, ಅವಶ್ಯಕ ದಾಖಲಾತಿಗಳ ಬಗ್ಗೆ ಆಯಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಮೂಲಕ ನಾಗರಿಕರಲ್ಲಿ ಸೂಕ್ತ ಅರಿವು ಮೂಡಿಸುವ ಕಾರ್ಯವನ್ನು ಮಾಡುವ ಜತೆಗೆ ಜನತಾ ದರ್ಶನದಲ್ಲಿ ಪ್ರತ್ಯೇಕ ಕೌಂಟರ್ ತೆರೆಯಬೇಕು. ಇದರಲ್ಲಿ ಯಾವುದೇ ಲೋಪಕ್ಕೆ ಅವಕಾಶ ನೀಡದೆ ನುರಿತ ಡಾಟಾ ಎಂಟ್ರಿ ಆಪರೇಟರ್, ಸಂಪನ್ಮೂಲ ವ್ಯಕ್ತಿಗಳೊಂದಿಗೆ ಹಾಜರಿರಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net