ಕಾರ್ಯಚಟುವಟಿಕೆಗಳ ಪ್ರದರ್ಶನಕ್ಕೆ ಚಾಲನೆ

bkt-10-6
ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ಸಂಕಿರಣದಲ್ಲಿ ಹಮ್ಮಿಕೊಂಡ ಕಾನೂನು ಸೇವಾ ಪ್ರಾಧಿಕಾರದ ಕಾರ್ಯ ಚಟುವಟಿಕೆಗಳ ಪ್ರದರ್ಶನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್.ದೇಶಪಾಂಡೆ ವೀಕ್ಷಣೆ ಮಾಡಿದರು. ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ.ರೆಹಮಾನ, ಮುಖ್ಯ ಪ್ರಧಾನ ನ್ಯಾಯಾಧೀಶೆ ಪಲ್ಲವಿ ಆರ್. ಇದ್ದರು.
Published on

ಬಾಗಲಕೋಟೆ: ಜಿಲ್ಲಾ ನ್ಯಾಯಾಲಯದ ಸಂಕಿರಣದಲ್ಲಿ ಹಮ್ಮಿಕೊಂಡ ಕಾನೂನು ಸೇವಾ ಪ್ರಾಧಿಕಾರದ ಕಾರ್ಯ ಚಟುವಟಿಕೆಗಳ ಪ್ರದರ್ಶನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್.ದೇಶಪಾಂಡೆ ಅವರು ಚಾಲನೆ ನೀಡಿದರು.


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾ.ಪಂ, ಕಂದಾಯ ಇಲಾಖೆ, ವಾರ್ತಾ ಇಲಾಖೆ, ಶಿಕ್ಷಣ, ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಚಟುವಟಿಕೆಗಳ ಪ್ರದರ್ಶನವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.


ಪ್ರದರ್ಶನದಲ್ಲಿ ವಿವಿಧ ಕಾಯ್ದೆಗಳ ಮಾಹಿತಿ, ಪ್ರಾಧಿಕಾರದ ಮೂಲಕ ಉಚಿತ ಕಾನೂನು ಸೇವೆಗಳ ಬಗ್ಗೆ, ಪ್ರಾಧಿಕಾರದ ಮೂಲಕ ಸೇವೆ ನೀಡಿರುವ ಬಗ್ಗೆ, ಜಾಗೃತಿ ಕಾರ್ಯಕ್ರಮ ಹಾಗೂ ಕಾನೂನಿಗೆ ಸಂಬಂಧಿಸಿದ ಪುಸ್ತಕಗಳನ್ನು ಸಹ ಪ್ರದರ್ಶನಕ್ಕೆ ಇಡಲಾಗಿತ್ತು. ಸ್ವಯಂ ಸೇವಾ ಸಂಘ ಸಂಸ್ಥೆಗಳ ಪ್ರತಿನಿಽಗಳು, ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಪೆನೆಲ್ ಅಡ್ವಕೇಟ್, ವಕೀಲರ ಸಂಘದ ಪದಾಧಿಕಾರಿಗಳು ಸೇರಿ ೫ ನೂರಕ್ಕು ಹೆಚ್ಚು ಜನ ಪ್ರದರ್ಶನವನ್ನು ವೀಕ್ಷಿಸಿದರು.


ಕಾರ್ಯಕ್ರಮದಲ್ಲಿ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ.ರೆಹಮಾನ, ಮುಖ್ಯ ಪ್ರಧಾನ ನ್ಯಾಯಾಧೀಶೆ ಪಲ್ಲವಿ ಆರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಾ ಪಸ್ತಾಪುರ, ೧ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ದಾವಪ್ಪ ಎಸ್.ಬಿ, ಪ್ರಧಾನ ದಿವಾಣಿ ನ್ಯಾಯಾಧೀಶ ನಾಗರಾಜ ಎಸ್, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಪ್ರಶಾಂತ ಚಟ್ನಿ ಎಸ್, ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಪೂಜಾರ, ಕಾರ್ಯದರ್ಶಿ ಶ್ರೀಶೈಲ ಹಾವರಗಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net