ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಿ

ydg1
ಯಾದಗಿರಿಯಲ್ಲಿ ಡಿಸಿ ಕಚೇರಿಯಲ್ಲಿ ಬುಧವಾರ ಕರೆದಿದ್ದ ವಿವಿಧ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ಮಾತನಾಡಿದರು. ಕಿರಣಕುಮಾರ, ಮಂಜುನಾಥ, ಉತ್ತರಾದೇವಿ ಮಠಪತಿ ಇತರರಿದ್ದರು.
Published on

ಯಾದಗಿರಿ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ಅನುಷ್ಠಾಗೊಂಡ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಹೇಳಿದರು. ಜಿ¯್ಲÁಧಿಕಾರಿ ಕಚೇರಿಯಲ್ಲಿ ಬುಧವಾರ ಕರೆದಿದ್ದ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶಾಧಿವೃದ್ಧಿ ಮಂಡಳಿ, ಶಾಸಕ, ಸಂಸದ, ಎಂಎಲ್‌ಸಿ ಮತ್ತು ಗಡಿನಾಡು ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿ ಗುಣಮಟ್ಟದೊಂದಿಗೆ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಿರ್ಮಿತಿ ಕೇಂದ್ರ, ಲೋಕೋಪಯೋಗಿ, ಪಂಚಾಯತ್ ರಾಜ್ ಇಂಜಿನಿಯರಿAಗ್, ಗ್ರಾಮೀಣ ಕುಡಿಯುವ ನೀರು ಮತ್ತು ಕೆಆರ್‌ಐಡಿಎಲï ಇಲಾಖೆ ಅಧಿಕಾರಿಗಳು ಕಾಮಗಾರಿ ಶೀಘ್ರ ಮುಗಿಸಿ ಅಭಿವೃದ್ಧಿಗೆ ನೆರವಾಗಬೇಕು ಎಂದು ಸೂಚಿಸಿದರು.

ಕಳೆದ ಸಾಲಿನಲ್ಲಿ ಅನುಮೋದನೆಗೊಂಡ ಕಾಮಗಾರಿಗಳ ಅಂದಾಜು ಪಟ್ಟಿ ಸಲ್ಲಿಸಿ ಆಡಳಿತಾತ್ಮಕ ಅನುಮೋದನೆ ಪಡೆದು ಕಾಮಗಾರಿ ಆರಂಭಿಸಿ, ತ್ವರಿತವಾಗಿ ಪೂರ್ಣಗೊಳಿಸಲು ಸಂಬAಧಿಸಿದ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿ¯್ಲೆಯಲ್ಲಿ ಕಳೆದ ಸಾಲಿನಲ್ಲಿ ಮೆಗಾ ಮ್ಯಾಕ್ರೋ ಯೋಜನೆಯಡಿ ತೋಟಗಾರಿಕೆ ಇಲಾಖೆಯ, ಲೋಕೋಪಯೋಗಿ, ಪಂಚಾಯತ್ ರಾಜ್, ಆರೋಗ್ಯ ಇಲಾಖೆಗೆ ಸಂಬAಧಿಸಿದ ಕಾಮಗಾರಿ ಆರಂಭಿಸಬೇಕಾಗಿದ್ದು, ಇನ್ನೂ ಆರಂಭವಾಗದ ಕಾಮಗಾರಿಗಳ ಮಾಹಿತಿಯನ್ನು ಸಂಬAಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಕಾಮಗಾರಿಗಳಿಗೆ ಶೀಘ್ರ ಚಾಲನೆ ನೀಡಬೇಕು ಎಂದರು.

ಮAಡಳಿಯಿAದ ಅನುಮೋದನೆಗೊಂಡ ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ, ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ಆದ್ಯತೆ ಮೇರೆಗೆ ಆರಂಭಿಸಬೇಕು. ಸ್ಥಳದ ಸಮಸ್ಯೆ ಇರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳಿಗೆ ಸಂಬAಧಿಸಿದAತೆ ಮೇಲಧಿಕಾರಿಗಳ ಮತ್ತು ಡಿಡಿಪಿಐ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಸ್ಯೆ ಇತ್ಯರ್ಥಪಡಿಸಿ, ನಿಗದಿಪಡಿಸಿದ ಆರ್ಥಿಕ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚನೆ ನೀಡಿದರು.

ಜಿ¯್ಲÁ ಪಂಚಾಯಿತಿ ಸಿಪಿಒ ಕುಮುಲಯ್ಯ, ಲೋಕೋಪಯೋಗಿ ಇಲಾಖೆ ಎಇಇ ಅಭಿಮನ್ಯು, ನಿರ್ಮಿತಿ ಕೇಂದ್ರದ ಅಧಿಕಾರಿ ಕಿರಣಕುಮಾರ, ಡಿಡಿಪಿಐ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಗಂಗಾಧರ ದೊಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net