ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಿ

22CBP4(Dc) (1)
Published on

ಚಿಕ್ಕಬಳ್ಳಾಪುರ : ನಿಗದಿತ ಸಮಯಕ್ಕೆ ಕ್ರಿಯಾಯೋಜನೆ ರೂಪಿಸುವಿಕೆ, ಕಾಲಮಿತಿಯಲ್ಲಿ ಕಾಮಗಾರಿ ಮುಗಿಸುವುದರಲ್ಲಿ ನಿರ್ಲಕ್ಷ್ಯ ವಹಿಸಿದಾಗ ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಎಸ್‌ಸಿಪಿ ಮತ್ತು ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯ ಅಭಿವೃದ್ಧಿಗಾಗಿ ವಿಶೇಷ ಘಟಕದಡಿ ಬಿಡುಗಡೆಯಾಗುವ ಅನುದಾನವನ್ನು ನಿಯಮಾನುಸಾರ ಪೂರ್ಣ ಬಳಕೆ ಮಾಡಬೇಕು. ಪ್ರತಿ ಇಲಾಖೆಗೆ ಬಿಡುಗಡೆಯಾಗುವ ಅನುದಾನಕ್ಕೆ ಅನುಗುಣವಾಗಿ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಕ್ರಿಯಾಯೋಜನೆಯನ್ನು ರೂಪಿಸಿ, ಅನುಮೊದನೆ ಪಡೆದುಕೊಳ್ಳಬೇಕು. ಮುಂದಿನ ಸಭೆಯೊಳಗೆ ಪ್ರತಿ ಇಲಾಖೆಯಿಂದ ಶೇ.80 ರಷ್ಟು ಪ್ರಗತಿಯನ್ನು ಸಾಧಿಸಲೇಬೇಕು ಎಂದರು.

ಕಾಮಗಾರಿಗಳ ಶಂಕು ಸ್ಥಾಪನೆ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಮಗಾರಿಗಳ ಬಗ್ಗೆ ಗಮನ ಹರಿಸಬೇಕು. ಕಳೆದ ಸಾಲಿನ ಅನುದಾನವನ್ನು ಸಮರ್ಪಕವಾಗಿ ಬಳಸಿರುವ ಕುರಿತು ವರದಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ಎಲ್ಲ ಇಲಾಖೆಗಳು ಪ್ರತಿ ತಿಂಗಳು ವರದಿಯನ್ನು ನೀಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ತೇಜಾನಂದರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಷಾದ್ರಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net