ಕಾಲೇಜ್ ಧೋರಣೆ ಖಂಡಿಸಿ ಪ್ರತಿಭಟನೆ

12sdp3
Published on

ಸಿದ್ದಾಪುರ: ತಾಲೂಕಿನ ಬಿಳಗಿ ಜ್ಞಾನಸಾಗರ ಕಲಾ ಮತ್ತು ವಾಣಿಜ್ಯ ಸ್ವತಂತ್ರ ಅನುದಾನಿತ ಪಪೂ ಕಾಲೇಜ್ ಆಡಳಿತ ಮಂಡಳಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಸ್ಥಳೀಯರು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಲೇಜ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಎನ್. ನಾಯ್ಕ ಬೇಡ್ಕಣಿ ಮಾತನಾಡಿ, ಕಾಲೇಜಿನ ಆಡಳಿತ ಮಂಡಳಿ ಸ್ಥಳೀಯ ಅಭಿವೃದ್ಧಿ ಸಮಿತಿಯ ಯಾವುದೇ ಸಲಹೆ ಪಡೆಯದೆ ಮನಸೋ ಇಚ್ಛೆ ನಡೆದುಕೊಳ್ಳುತ್ತಿದ್ದಾರೆ. ಕಾಲೇಜು ಪ್ರಾರಂಭವಾದಾಗಿನಿಂದ ಉಪನ್ಯಾಸಕರಾಗಿದ್ದ ಗಣೇಶ ನಾಯ್ಕ ಅವರನ್ನು ಅಮಾನತು ಮಾಡಿರುವುದು ಖಂಡನೀಯ. ಆಡಳಿತ ಮಂಡಳಿಯನ್ನು ಸರ್ಕಾರ ವಜಾಗೊಳಿಸಿ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಆಗ್ರಹಿಸಿದರು. ಬಳಿಕ ತಹಸೀಲ್ದಾರ್ ಮಂಜುಳಾ ಎಸ್. ಭಜಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರ್, 15 ದಿನದೊಳಗೆ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು, ಕಾಲೇಜ್​ನ ಆಡಳಿತ ಮಂಡಳಿ ನಿರ್ದೇಶಕರ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ರೈತ ಸಂಘದ ತಾಲೂಕಾಧ್ಯಕ್ಷ ವೀರಭದ್ರ ನಾಯ್ಕ, ತಾಪಂ ಮಾಜಿ ಅಧ್ಯಕ್ಷ ಸಿ.ಆರ್. ನಾಯ್ಕ, ಸದಸ್ಯರಾದ ವಿವೇಕ ಭಟ್ಟ, ನಾಸಿರ್ ಖಾನ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಆರ್. ನಾಯ್ಕ ಹೆಗಾರಕೈ, ಪ್ರಮುಖರಾದ ಕೆ.ಒ. ನಾಯ್ಕ, ಸಾವೇರ್ ಡಿ. ಸೀಲ್ವಾ, ಘನಿ ಸಾಬ್, ರಾಮಕೃಷ್ಣ ನಾಯ್ಕ, ವಿನಾಯಕ ನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net