

ಮೈಸೂರು: ಆರ್‌ಸಿಬಿ ಅಭಿಮಾನಿಗಳ ದುರಂತ ಸಾವಿನ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಿದೆ ಎಂದು ನಾನು ಈಗಲೇ ಹೇಳೋದಿಲ್ಲ.
ಆದರೆ, ಈ ಸಾವಿನ ಕುರಿತು ಸಮಗ್ರ ತನಿಖೆ ಆಗಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವ್ಯವಸ್ಥೆ ಮಾಡಿಕೊಂಡು ಎರಡು ದಿನಗಳ ನಂತರ ಸಂಭ್ರಮಾಚರಣೆ ಮಾಡಬಹುದಿತ್ತು.
ಆದರೆ ರಾಜ್ಯ ಸರ್ಕಾರವು ಆತುರದಿಂದ ನಿರ್ಧಾರ ತೆಗೆದುಕೊಂಡಿದ್ದರಿಂದ ಈ ದುರಂತವಾಗಿದೆ ಎಂದು ಎಂದು ಕಿಡಿಕಾರಿದರು.