

ಹರಪನಹಳ್ಳಿ: ಸುಜಲಾನ್ ಕಂಪನಿಯ ಕಾವಲುಗಾರರನ್ನು ಸಂಸ್ಥೆಯ ಹಿರಿಯ ಸಿಬ್ಬಂದಿ ಅವಾಚ್ಯವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿ ಎಐಸಿಸಿಟಿಯುದಿಂದ ತಾಲೂಕು ಆಡಳಿತ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧ್ಯಕ್ಷ ಸಂದೇರ ಪರಶುರಾಮ ಮಾತನಾಡಿ, ಕಣಿವಿಹಳ್ಳಿ ಸಮೀಪದ ಜಾಜಿಕಲ್ ಗುಡ್ಡದಲ್ಲಿ ಸುಜಲಾನ್ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾವಲುಗಾರರಿಗೆ ಸರಿಯಾದ ವೇತನ ನೀಡದೆ ಕಿರುಕುಳ ನೀಡಲಾಗುತ್ತಿದ್ದು, ಕಂಪನಿ ಕಾರ್ಮಿಕ ಕಾನೂನು ಉಲ್ಲಂಘನೆ ಮಾಡುತ್ತಿದೆ ಎಂದು ದೂರಿದರು. ಯಾವುದೋ ಒತ್ತಡಗಳಿಂದ ಕಾವಲುಗಾರರನ್ನು ಕೆಲಸದಿಂದ ತೆಗೆದು ಹಾಕಲು ನೋಟಿಸ್ ಜಾರಿ ಮಾಡಲಾಗಿದೆ. ಕಾರ್ಮಿಕರನ್ನು ಕೆಲಸದಲ್ಲಿ ಮುಂದುವರಿಸಿ ಕೆಲಸಕ್ಕೆ ತಕ್ಕ ವೇತನ ನೀಡಬೇಕೆಂದು ಆಗ್ರಹಿಸಿದರು.