ಕಾವಾ ಮೇಳಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ

Cava
Published on

ಮೈಸೂರು: ನಶಿಸಿ ಹೋಗುತ್ತಿರುವ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಲು ರಾಜ್ಯದಲ್ಲಿ ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ‘ಮೂಲ ಸಂಸ್ಕೃತಿ-ಕನ್ನಡ ಸಂಸ್ಕೃತಿ’ ಹೆಸರಿನಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಕಾವಾ ಮೇಳ ಮತ್ತು ಕಾವಾದ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿ, ನಶಿಸಿ ಹೋಗುತ್ತಿರುವ ಕಲೆ, ಸಂಸ್ಕೃತಿಗೆ ಉತ್ತೇಜನ ನೀಡಲು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಮೈಸೂರು ಮಹಾರಾಜರು ಪ್ರಾರಂಭಿಸಿದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಕಾವಾದಲ್ಲಿ ಪ್ರತಿವರ್ಷ ನೂರಾರು ವಿದ್ಯಾಥಿ ಗರ್ಳಿಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅಭಿವೃದ್ಧಿ ಎಂದರೆ ಕೇವಲ ಕಟ್ಟಡಗಳನ್ನು ನಿರ್ಮಾಣ ಮಾಡುವುದು ಮಾತ್ರವಲ್ಲ, ಸಾಂಸ್ಕೃತಿಕವಾಗಿಯೂ ಸಮಾಜವನ್ನು ಕಟ್ಟುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಲೆ, ಸಂಸ್ಕೃತಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎದು ಹೇಳಿದರು.

ಶಾಸಕ ತನ್ವೀರ್ ಸೇಠ್ ಮಾತನಾಡಿ, ಕಾವಾದಲ್ಲಿ ಸಾಕಷ್ಟು ಖಾಲಿ ಹುದ್ದೆಗಳು ಇದ್ದು, ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ವಹಿಸಬೇಕು. ಕ್ರೀಡೆ ಮತ್ತು ಕಲೆ ಸಮಾಜವನ್ನು ಬೆಸೆಯುವ ಕಾರ್ಯ ಮಾಡುತ್ತದೆ. ಹಾಗಾಗಿ ಈ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ವೇದಿಕೆಯಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಎಂ. ಶಿವಕುಮಾರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ, ಕಾವಾಡ ಡೀನ್ ಎ. ದೇವರಾಜು, ಮಾಜಿ ಉಪ ಮೇಯರ್ ಶ್ರೀಧರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net