ಕಾವೇರಿ ಆರತಿ ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು

16-09-25krs1 (4)
Published on

ಕೆ.ಆರ್.ಸಾಗರ: ವಿಶ್ವ ವಿಖ್ಯಾತ ಬೃಂದಾವನದಲ್ಲಿ 11 ದಿನಗಳ ಕಾಲ ಹಮ್ಮಿಕೊಂಡಿರುವ ಕಾವೇರಿ ಆರತಿ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಕಾವೇರಿ ಆರತಿ ಸಮಿತಿ ಅಧ್ಯಕ್ಷ ರಾಮ್‌ಪ್ರಸಾದ್ ಮನೋಹರ್, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ನೇತೃತ್ವದಲ್ಲಿ ಕಾವೇರಿ ಸಭಾಂಗಣದಲ್ಲಿ ಸಭೆ ನಡೆಯಿತು.

ಬೃಂದಾವನದಲ್ಲಿರುವ ದೋಣಿ ವಿಹಾರ ಕೇಂದ್ರದಲ್ಲಿರುವ ಚಿಕ್ಕ ಕಾವೇರಿ ಪ್ರತಿಮೆ ಮುಂಭಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿದ ರಾಮ್ ಪ್ರಸಾದ್ ಮನೋಹರ್ ಮತ್ತು ಸಮಿತಿ ಸದಸ್ಯ ದಿನೇಶ್ ಗೂಳಿಗೌಡ ಅವರು, ಕಾವೇರಿ ನೀರಾವರಿ ನಿಗಮದ ಎಂ.ಡಿ.ಮಹೇಶ್, ಸಮಿತಿಯಲ್ಲಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಸಿದ್ಧತೆ ಕುರಿತು ಚರ್ಚಿಸಿದರು.

ನಂತರ ಬೃಂದಾವನದಲ್ಲಿ ಕಾವೇರಿ ಆರತಿ ಮತ್ತು ವೇದಿಕೆ ನಿರ್ಮಾಣ ಮಾಡುತ್ತಿರುವ ಸ್ಥಳಕ್ಕೆ ತೆರಳಿ ಸಿದ್ಧತೆ ಪರಿಶೀಲಿಸಿದರು. ಮನೋರಂಜನಾ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ತಯಾರಿ ಜೋರಾಗಿ ನಡೆಯುತ್ತಿದ್ದು, ಆಹಾರ ಮೇಳ ಮತ್ತು ಕರಕುಶಲ ಆಂಗಡಿ, ಮಳಿಗೆಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಮುಖ್ಯ ಇಂಜಿನಿಯರ್ ಪ್ರಕಾಶ್, ಅಧೀಕ್ಷಕ ಇಂಜಿನಿಯರ್ ರಘುರಾಮ್, ಕಾರ್ಯಪಾಲಕ ಇಂಜಿನಿಯರ್ ಜಯಂತ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಫಾರೂಕ್ ಅಬು, ಕಿಶೋರ್ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net