ಕಾವೇರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮ್ಯಾರಥಾನ್

3ss1mairatan ge chalane
ಶನಿವಾರಸಂತೆ ಕಾವೇರಿ ಪ.ಪೂ.ಕಾಲೇಜಿನ ಕಾವೇರಿ ಸಂಭ್ರಮ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಮ್ಯಾರಥಾನ್ ಓಟದ ಸ್ಪರ್ಧೆಗೆ ಕಾಲೇಜಿನ ಪ್ರಾಂಶುಪಾಲ ದೇವರಾಜ್ ಚಾಲನೆ ನೀಡಿದರು
Published on

ಶನಿವಾರಸಂತೆ: ಸ್ಥಳೀಯ ಪ್ರಜ್ವಲ್ ಎಜುಕೇಶನ್ ಟ್ರಸ್ಟ್‌ನ ಕಾವೇರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಪ್ರಯುಕ್ತ ಶನಿವಾರ ಬೆಳಗ್ಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮೀಪದ ಆಲೂರುಸಿದ್ದಾಪುರದಿಂದ ಸುಮಾರು 15 ಕಿ.ಮೀ. ಮ್ಯಾರಥಾನ್ ಹಮ್ಮಿಕೊಳ್ಳಲಾಗಿತ್ತು.

ಸ್ಪರ್ಧೆಯಲ್ಲಿ ಕಾಲೇಜಿನ ಪಿಯುಸಿ ವಿಭಾಗದ ಬಾಲಕರ ವಿಭಾಗದಲ್ಲಿ ಉನ್ನೇಶ್ ಪ್ರಥಮ, ಅಕ್ಷಯ್ ದ್ವಿತೀಯ ಮತ್ತು ವರುಣ್ ತೃತೀಯ ಸ್ಥಾನ ಪಡೆದರು. ಬಾಲಕಿಯರ ವಿಭಾಗದಲ್ಲಿ ಶ್ರೀನಿಧಿ ಪ್ರಥಮ, ವಿಶ್ರುತಾ ದ್ವಿತೀಯ ಮತ್ತು ರೇವತಿ ತೃತೀಯ ಸ್ಥಾನ ಪಡೆದರು. ಪ್ರೌಢಶಾಲಾ ವಿಭಾಗದಲ್ಲಿ ಮನಿಷ್ ಪ್ರಥಮ, ತೇಜಸ್ ದ್ವಿತೀಯ ಮತ್ತು ಇಮ್ರಾನ್ ತೃತೀಯ ಸ್ಥಾನ ಪಡೆದರು. ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಎನ್.ದೇವರಾಜ್ ಮ್ಯಾರಥಾನ್‌ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪನ್ಯಾಸಕ ಕಾಂತರಾಜ್, ದೈಹಿಕ ಶಿಕ್ಷಣ ಶಿಕ್ಷಕ ಭಾಸ್ಕರ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net