ಕಾವೇರಿ ತಂತ್ರಾಂಶಕ್ಕೆ ಚಾಲನೆ

26ark1
Published on

ಅರಕಲಗೂಡು: ಪಟ್ಟಣದ ತಾಲೂಕು ಕಚೇರಿಯ ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆರಂಭಿಸಿರುವ ಕಾವೇರಿ 2.0 ಆನ್‌ಲೈನ್ ತಂತ್ರಾಂಶಕ್ಕೆ ಶುಕ್ರವಾರ ಶಾಸಕ ಎ. ಮಂಜು ಚಾಲನೆ ನೀಡಿದರು.


ಸರ್ಕಾರ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಾವೇರಿ 2.0 ಆನ್‌ಲೈನ್ ತಂತ್ರಾಂಶದ ಮೂಲಕ ನೋಂದಣಿ ಪ್ರಾರಂಭಿಸಿದೆ. ತಂತ್ರಜ್ಞಾನ ಸುಧಾರಿಸಿದ ಸಂದರ್ಭದಲ್ಲಿ ಜನರಿಗೆ ಉಪಯೋಗವಾಗುವ ಕಾರ್ಯಕ್ರಮ ರೂಪಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.


ಅಧಿಕಾರಿಗಳು ಗ್ರಾಮೀಣ ಜನರಿಗೆ ಕಾವೇರಿ 2.0 ಆನ್‌ಲೈನ್ ತಂತ್ರಾಂಶ ಕುರಿತು ಸಮಗ್ರ ಮಾಹಿತಿ ನೀಡಬೇಕು. ಆಗ ಸರ್ಕಾರದ ಉದ್ದೇಶ ಈಡೇರಲಿದೆ ಎಂದು ಹೇಳಿದರು. ತಹಸೀಲ್ದಾರ್ ಬಸವ ರೆಡ್ಡಪ್ಪ ರೋಣದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net