

ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಪೀಠೋಪಕರಣಗಳು, ಪಠ್ಯಪುಸ್ತಕಗಳು ಹಾಗೂ ಸರ್ಕಾರಿ ದಾಖಲೆಗಳು ಸಂಪೂರ್ಣ ಭಸ್ಮವಾಗಿವೆ.
ಭಾನುವಾರ ಶಾಲೆಗೆ ರಜೆ ಇದ್ದುದರಿಂದ ನಿರ್ಜನವಾಗಿದ್ದ ಶಾಲಾ ಕೊಠಡಿಗೆ ದುಷ್ಕರ್ಮಿಗಳು ಬೆಂಕಿಯಿಟ್ಟಿದ್ದಾರೆ. ಶಾಲೆಯಿಂದ ಹೊಗೆ ಬರುತ್ತಿದ್ದುದನ್ನು ಕಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರು. ಆದರೆ ಅಗ್ನಿಶಾಮಕ ವಾಹನ ಸ್ಥಳಕ್ಕೆ ಬರುವಷ್ಟರಲ್ಲಿ ಕೊಠಡಿಯಲ್ಲಿದ್ದ ಪೀಠೋಪಕರಣಗಳು ಹಾಗೂ ಪುಸ್ತಕಗಳು ಬೆಂಕಿಗಾಹುತಿಯಾಗಿವೆ. ಅಕ್ಕಪಕ್ಕದ ಕಟ್ಟಡಗಳಿಗೆ ವ್ಯಾಪಿಸದಂತೆ ಬೆಂಕಿ ನಂದಿಸಲಾಯಿತು. ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.