ಕಿಡಿಗೇಡಿಗಳಿಗೆ ಸರ್ಕಾರಿ ವಾಹನಗಳೇ ಟಾರ್ಗೆಟ್!

2525
Published on

ಬೆಳಗಾವಿ: ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಪುತ್ಥಳಿಗೆ ಕಿಡಿಗೇಡಿಗಳು ಅವಮಾನ ಮಾಡಿರುವ ಕೃತ್ಯ ಖಂಡಿಸಿ ಶುಕ್ರವಾರ ತಡರಾತ್ರಿ ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ ವಿವಿಧ ಸಂಘಟನೆ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದರು. ಅಧಿವೇಶನಕ್ಕೆ ಅಧಿಕಾರಿಗಳನ್ನು ಕರೆತಂದಿದ್ದ ವಾಹನಗಳು ಹಾಗೂ ಆ ಸಂದರ್ಭದಲ್ಲಿ ಸಂಚರಿಸುತ್ತಿದ್ದ ಅನೇಕ ಕಾರು, ಆಟೋ ಮತ್ತು ಪೊಲೀಸ್ ವಾಹನಗಳ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಿದರು.

ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಅವಮಾನ ಮಾಡಿದವರಿಗೆ ಶಿಕ್ಷೆಯಾಗಬೇಕೆಂದು ರಸ್ತೆಯಲ್ಲೇ ಧರಣಿ ನಡೆಸಿದರು. ಬಳಿಕ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಜನರನ್ನು ಚದುರಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಮಾರ್ಕೆಟ್ ಹಾಗೂ ಖಡೇ ಬಜಾರ್ ಠಾಣೆ ಪೊಲೀಸರು ಅಲರ್ಟ್ ಆಗಿದ್ದು, ತೀವ್ರ ನಿಗಾ ವಹಿಸಿದ್ದಾರೆ. ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ನಗರದ ಎಲ್ಲ ಠಾಣೆ ವ್ಯಾಪ್ತಿಯಲ್ಲಿ ಬಿಗಿ ಭದ್ರತೆ ವಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net