

ತುಮಕೂರು : ವೇದಿಕೆ ಮೇಲೆ ಸಾರ್ವಜನಿಕವಾಗಿ ಕಿತ್ತಾಡೋದು ಬಿಟ್ಟು, ತಮ್ಮ ಪೌರುಷವನ್ನು ಅತಿಥಿ ಉಪನ್ಯಾಸಕ ಬೇಡಿಕೆ ಈಡೇರಿಸುವ ಕೆಲಸದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಮಾಡಲಿ. ಅದನ್ನು ಬಿಟ್ಟು ರಾಜಕಾರಣಕ್ಕೆ ತೊಡೆತಟ್ಟುವುದನ್ನು ಬಿಡಲಿ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಹರಿಹಾಯ್ದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅತಿಥಿ ಉಪನ್ಯಾಸಕರ ಹೋರಾಟದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜಕಾರಣಕ್ಕಾಗಿ ಪಾದಯಾತ್ರೆ ಮಾಡುವ ಮಹಾನುಭಾವರು ಅತಿಥಿ ಉಪನ್ಯಾಸಕರ ಸಮಸ್ಯೆ ಬಗ್ಗೆ ಗಮನ ಹರಿಸಬೇಕು. ಪಕ್ಷಾತೀತವಾಗಿ, ಜಾತ್ಯತೀತವಾಗಿ ಅತಿಥಿ ಉಪನ್ಯಾಸಕರ ಹೋರಾಟ ಬೆಂಬಲಿಸುವ ಮೂಲಕ ಅವರ ಹೋರಾಟಕ್ಕೆ ಸಹಕಾರ ನೀಡಬೇಕಿರುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯದೆಲ್ಲಡೆಯಿಂದ ಬಂದಿದ್ದ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಲು ಬಂದರೂ ಸ್ವೀಕರಿಸಲಿಲ್ಲ. ಯುಜಿಸಿ ಮಾರ್ಗಸೂಚಿಗಳನ್ವಯ ಕೆಲಸ ಮಾಡಲು ಅವಕಾಶ ನೀಡದ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ? ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಲು ಸರ್ಕಾರ ಉಡಾಫೆಯಿಂದ ವರ್ತಿಸುತ್ತಿದೆ. ಅವರ ಮನವಿ ಸ್ವೀಕರಿಸಲು ಯೋಗತ್ಯೆ ಇಲ್ಲದ ಅಯೋಗ್ಯ ಸರ್ಕಾರ ಎಂದು ತರಾಟೆ ತೆಗೆದುಕೊಂಡರು.
ಅತಿಥಿ ಉಪನ್ಯಾಸಕ ಹೋರಾಟದ ಬಗ್ಗೆ ಸರ್ಕಾರ ಗಮನ ಹರಿಸದೇ ಇರುವುದು ದುರದೃಷ್ಟಕರ. ಈಗ ಬರುತ್ತಿರುವ ಸಂಬಳದಲ್ಲಿ ಜೀವನ ನಡೆಸುವುದಕ್ಕೆ ಸಾಧ್ಯವೇ ಎನ್ನುವುದನ್ನು ಅರಿತುಕೊಳ್ಳಬೇಕಿದೆ. ಉಪನ್ಯಾಸಕರಿಲ್ಲದೇ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದು ಸರ್ಕಾರ ತುರ್ತಾಗಿ ಈ ಸಮಸ್ಯೆ ಬಗೆಹರಿಸಬೇಕು ಎಂದು ತಾಲೂಕು ಜೆಡಿಎಸ್ ಎಸ್ಸಿ ಘಟಕದ ಅಧ್ಯಕ್ಷ ಬೆಳಗುಂಬ ವೆಂಕಟೇಶ್ ಆಗ್ರಹಿಸಿದರು.
ಅತಿಥಿ ಉಪನ್ಯಾಸಕರು ಇಪ್ಪತ್ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಯಾರೊಬ್ಬರೂ ಇತ್ತಕಡೆ ಗಮನಹರಿಸಿಲ್ಲ. ಬಡ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗಿದ್ದರು ಸಹ ಸರ್ಕಾರ ಗಮನಹರಿಸುತ್ತಿಲ್ಲ. ಸರ್ಕಾರಕ್ಕೆ ಶ್ರೀಮಂತರ ಮಕ್ಕಳ ಬಗ್ಗೆ ಗಮನ ಇದೆಯೇ ಹೊರತು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡುತ್ತಿಲ್ಲ. ರಾಮಚಂದ್ರಪ್ಪ ಜೆಡಿಎಸ್ ತಾಲೂಕು ಅಧ್ಯಕ್ಷ