ಕಿತ್ತೂರು ರಾಣಿ ಚನ್ನಮ್ಮ ಸ್ಫೂರ್ತಿದಾಯಕ

23-pnp 1
ಪಾಂಡವಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ನೆರವೇರಿಸಲಾಯಿತು. ಮೋಹನ್, ಮಹದೇವು, ಮಂಜುನಾಥ್ ಇತರರು ಇದ್ದರು.
Published on

ಪಾಂಡವಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ರಾಜ್ಯದ ಮೊಟ್ಟ ಮೊದಲ ವೀರವನಿತೆ ಕಿತ್ತೂರು ರಾಣಿ ಚನ್ನಮ್ಮನ ಹೋರಾಟದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ ಎಂದು ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮಂಡಿಬೆಟ್ಟಹಳ್ಳಿ ಮಂಜುನಾಥ್ ಹೇಳಿದರು.

ಪಟ್ಟಣದ ಆಡಳಿತ ಸೌಧದ ಸಭಾಂಣದಲ್ಲಿ ತಾಲೂಕು ಆಡಳಿತದ ವತಿಯಿಂದ ಬುಧವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ರಾಣಿ ಚನ್ನಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ನೆರವೇರಿಸಿದ ಬಳಿಕ ಮಾತನಾಡಿದರು.

12 ಶತಮಾನದಲ್ಲಿ ಬಸವಣ್ಣನವರು ಸಾರಿದ ಸಮಾನತೆಯ ತತ್ವವನ್ನು ಅರಿತು ಮಹಿಳೆಯರು ಕೂಡ ಯುದ್ಧ ಭೂಮಿಯಲ್ಲಿ ನಿಂತು ಹೋರಾಟ ಮಾಡಬಹುದು ಎಂಬುದನ್ನು ಕಿತ್ತೂರು ರಾಣಿ ಚನ್ನಮ್ಮ ಜಗತ್ತಿಗೆ ತೋರಿಸಿಕೊಟ್ಟರು. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ನಡೆಸಿದ ಹೋರಾಟ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿಯಾಯಿತು ಎಂದು ಅಭಿಪ್ರಾಯಿಸಿದರು.

ಇಂದಿನ ಯುವ ಪೀಳಿಗೆ ಮಹನೀಯರ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ದೇಶದಕ್ಕಾಗಿ ಹೋರಾಡಿದ ವೀರರು ಮತ್ತು ಸ್ವಾತಂತ್ರ್ಯ ಹೋರಾಗಾರರ ಇತಿಹಾಸ ತಿಳಿದುಕೊಳ್ಳಬೇಕು. ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಕೂಡ ಜಯಂತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣಗೊಳಿಸಬೇಕು ಎಂದರು.

ಕಂದಾಯ ಇಲಾಖೆ ಶಿರಸ್ತೇದಾರ್ ಮೋಹನ್, ಕಂದಾಯ ನಿರೀಕ್ಷಕ ಮಹದೇವು, ಮುಖಂಡರಾದ ಮಂಡಿಬೆಟ್ಟಹಳ್ಳಿ ದ್ಯಾವಪ್ಪ, ಡಿ.ಕೆ.ಅಂಕಯ್ಯ, ವಿಜಯಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net