ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಅದ್ದೂರಿ ಸ್ವಾಗತ

jyothi yatre
Published on

ರಾಯಚೂರು: ಕಿತ್ತೂರು ಉತ್ಸವದ ಅಂಗವಾಗಿ ಹಮ್ಮಿಕೊಂಡಿರುವ ವಿಜಯ ಜ್ಯೋತಿ ಯಾತ್ರೆಯನ್ನು ನಗರದ ಬಸವೇಶ್ವರ ವೃತ್ತದಲ್ಲಿ ರಾಯಚೂರು ತಹಸೀಲ್ದಾರ್ ಸುರೇಶ ವರ್ಮಾ ಸ್ವಾಗತಿಸಿದರು.

ರಥದಲ್ಲಿದ್ದ ರಾಣಿ ಚೆನ್ನಮ್ಮ ಪುತ್ಥಳಿಗೆ ಹೂ ಮಾಲೆ ಹಾಕಿ, ರಥಕ್ಕೆ ಪೂಜೆ ಸಲ್ಲಿಸಲಾಯಿತು. ವಿವಿಧ ಕಲಾ ತಂಡಗಳ ಮೂಲಕ ಡಿಸಿ ಕಚೇರಿ, ಮಹತ್ಮಾಗಾಂಧಿ ವೃತ್ತ, ಚಂದ್ರಮೌಳೇಶ್ವರ ವೃತ್ತ, ಬಸವನಬಾವಿ ವೃತ್ತ, ಗಂಜ್ ವೃತ್ತ ಮಾರ್ಗದಲ್ಲಿ ಸಂಚರಿಸಿತು.

ತಾಲೂಕಿನ ದೇವಸುಗೂರು ಗ್ರಾಮದಲ್ಲಿ ರಥವನ್ನು ಯಾದಗಿರಿ ಜಿಲ್ಲೆಗೆ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಇಒ ಚಂದ್ರಶೇಖರ ಪವಾರ್, ನಗರಸಭೆಯ ಪೌರಾಯಕ್ತ ಗುರುಸಿದ್ದಯ್ಯ ಹಿರೇಮಠ, ಪ್ರಮುಖರಾದ ದಾನಮ್ಮ, ಇಸ್ಮಾಯಿಲ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net