ಕಿಮ್್ಸ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನ

H29 Kims Sucied 1
Published on

ಹುಬ್ಬಳ್ಳಿ: ವಿಷ ಸೇವಿಸಿ ತೀವ್ರವಾಗಿ ಅಸ್ವಸ್ಥನಾಗಿ ಕಿಮ್ಸ್​ಗೆ ದಾಖಲಾಗಿದ್ದ ವ್ಯಕ್ತಿಯೊಬ್ಬ ಕಿಮ್್ಸ ಕಟ್ಟಡದ ಎರಡನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದ್ದು, ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಆತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ಗಡೆಯಂಕನಹಳ್ಳಿ ಗ್ರಾಮದ ಮಲ್ಲೇಶಪ್ಪ ಚನ್ನಪ್ಪ ಕಳಲಿ (30) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ಆಸ್ತಿ ವಿಚಾರವಾಗಿ ತಂದೆಯೊಂದಿಗೆ ಜಗಳವಾಗಿತ್ತು. ಅದರಿಂದ ಬೇಸರಗೊಂಡಿದ್ದ ಮಲ್ಲೇಶಪ್ಪ ಎರಡು ದಿನಗಳ ಹಿಂದೆ ವಿಷ ಸೇವಿಸಿ ತೀವ್ರ ಅಸ್ವಸ್ಥನಾಗಿ ಕಿಮ್ಸ್​ಗೆ ದಾಖಲಾಗಿದ್ದ. ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ಆತ ಬುಧವಾರ ಬೆಳಗ್ಗೆ ಮೂರನೇ ಮಹಡಿಯ 305ನೇ ವಾರ್ಡ್​ನ ಕಿಟಕಿಯಿಂದ ಸಜ್ಜಾಗೆ ಹಾರಿ, ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೆ ಎಚ್ಚೆತ್ತ ಕಿಮ್್ಸ ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿ ಆತನ ಮನವೊಲಿಸಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಷ ಸೇವಿಸಿದ್ದ ಪ್ರಕರಣದಲ್ಲಿ ಸಾಮಾನ್ಯವಾಗಿ ಹೈಡೋಸ್ ಔಷಧ ನೀಡಲಾಗುತ್ತದೆ. ಆ ಮಬ್ಬಿನಲ್ಲಿ ಆತ ಎರಡನೇ ಬಾರಿಯೂ ಆತ್ಮಹತ್ಯೆಗೆ ಮುಂದಾಗಿದ್ದ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವಿದ್ಯಾನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net