ಕಿರಾಣಿ ಅಂಗಡಿಗಳಿಗೆ ಅಧಿಕಾರಿಗಳು ಭೇಟಿ

21Naregal1
Published on

ನರೇಗಲ್ಲ: ಪಟ್ಟಣದ ಕಿರಾಣಿ ಅಂಗಡಿಗಳಿಗೆ ತಾಲೂಕು ಆಹಾರ ನಿರೀಕ್ಷಕ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕರು ಮಂಗಳವಾರ ಬೆಳಗ್ಗೆ ಭೇಟಿ ನೀಡಿ ತಾಲೂಕಾಡಳಿತದ ದರಪಟ್ಟಿಯನುಗುಣವಾಗಿ ದಿನಸಿ ಮಾರಾಟ ಮಾಡುವಂತೆ ಸೂಚಿಸಿದರು.

ತಾಲೂಕು ಆಹಾರ ನಿರೀಕ್ಷಕ ಮಂಜುನಾಥ ತಳ್ಳಿಹಾಳ ಮಾತನಾಡಿ, ದಿನಸಿ ವಸ್ತುಗಳನ್ನು ನಿಗದಿಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಆದ್ದರಿಂದ, ತಹಸೀಲ್ದಾರರಿಂದ ದಿನಸಿ ಸಾಮಗ್ರಿಗಳ ದರಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದ್ದು, ಅದರಂತೆ ದಿನಸಿ ಮಾರಾಟ ಮಾಡಬೇಕು. ದುಪ್ಪಟ್ಟು ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಹೆಚ್ಚಿನ ದರ ನೀಡದೇ ನಿಗದಿತ ದರ ನೀಡಬೇಕು. ಹೆಚ್ಚುವರಿ ಹಣ ಕೇಳಿದರೆ ನಮ್ಮ ಗಮನಕ್ಕೆ ತರಬೇಕು ಎಂದರು.

ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಎಸ್.ಎಸ್. ಕುಷ್ಟಗಿ, ಪ.ಪಂ. ಆರೋಗ್ಯ ನಿರೀಕ್ಷಕ ರಾಮಚಂದ್ರಪ್ಪ ಕಜ್ಜಿ ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net