ಕಿಲ್ಕಾರಿ ಯೋಜನೆ ಪ್ರಚಾರಾಂದೋಲನ ಯಶಸ್ವಿ

CTD Kilkari Sticker....
Published on

ಚಿತ್ರದುರ್ಗ: ಸಾಮಾಜಿಕ ಜಾಲತಾಣಗಳಲ್ಲಿ ಕಿಲ್ಕಾರಿ ಯೋಜನೆ ಪ್ರಚಾರಾಂದೋಲನ ಯಶಸ್ವಿಯಾಗಿದೆ ಎಂದು ಡಿಎಚ್‌ಒ ಡಾ.ಜಿ.ಪಿ. ರೇಣುಪ್ರಸಾದ್ ತಿಳಿಸಿದ್ದಾರೆ.

ಗರ್ಭಿಣಿ, ಬಾಣಂತಿಯರಿಗೆ ಕಿಲ್ಕಾರಿ ಯೋಜನೆಯ ಮಹತ್ವ ತಿಳಿಸಲು ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ, ಆಶಾ ಕಾರ್ಯಕರ್ತೆ ಯರು ಮತ್ತಿತರರ ತಂಡಗಳು ಈ ಬಾರಿಯ ವಿಶ್ವ ಆರೋಗ್ಯ ದಿನದ ಸಂದರ್ಭ ತಾಯಿ, ಮಕ್ಕಳ ಆರೋಗ್ಯ ಸುಧಾರಿಸಲು ಕಿಲ್ಕಾರಿ ಯೋಜನೆಯ ಪ್ರಚಾರಾಂದೋಲನವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಲಕ್ಷಾಂತರ ಜನರಿಗೆ ಮಾಹಿತಿ ತಲುಪಿಸಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ರಾಜ್ಯಮಟ್ಟದ ಅಧಿಕಾರಿಗಳಿಂದ ಚಿತ್ರದುರ್ಗ ಜಿಲ್ಲೆ ಪ್ರಶಂಸೆಗೆ ಒಳಪಟ್ಟಿದೆ.

ಕಿಲ್ಕಾರಿ ಯೋಜನೆ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವ ಪೂರ್ವ ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ಅಂತರ ಇಲಾಖಾ ಸಮನ್ವಯ ಸಭೆ ನಡೆಸಿ, ಎಲ್ಲ ಇಲಾಖೆಗಳ ಸಹಕಾರ ಕೋರಲಾಗಿತ್ತು. ಸಿಇಒ ಸಲಹೆಯಂತೆ ಕ್ರಿಯಾಯೋಜನೆ ಸಿದ್ಧಪಡಿಸಲಾಗಿತ್ತು.

ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಜಿಲ್ಲಾ ಡಿಪಿಎಂ ಯೂನಿಟ್‌ಗಳಲ್ಲಿ ವಾರ್ ರೂಂ ರಚಿಸಿ ಏಪ್ರಿಲ್7ರಂದು ಸಾಮಾಜಿಕ ಜಾಲತಾಣಗಳಲ್ಲಿ ಏಕ ಕಾಲದಲ್ಲಿ ಮಾಹಿತಿಗಳನ್ನು ಹಂಚಿಕೊಳ್ಳಲಾಗಿತ್ತು ಎಂದು ಡಿಎಚ್‌ಒ ತಿಳಿಸಿದ್ದಾರೆ. ಪ್ರಚಾರಾಂದೋಲನ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net