ಕುಂದು ಕೊರತೆ ಸಲ್ಲಿಸಲು ಮನವಿ

Published on

ಚಾಮರಾಜನಗರ: ಜಿಲ್ಲೆಯಲ್ಲಿ ವಾಸವಿರುವ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ಕುಂದು ಕೊರತೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ತಿಳಿಸಿದೆ.

ಮೈಸೂರು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮುಂಬರುವ ದಿನಗಳಲ್ಲಿ ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ವಾಸವಿರುವ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಕುಂದು ಕೊರತೆ ಆಲಿಸಲು ಸಭೆ ನಡೆಸಲು ಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ವಾಸವಿರುವ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ಕುಂದು ಕೊರತೆಗಳನ್ನು ಲಿಖಿತ ರೂಪದಲ್ಲಿ ಅ.10ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಮೈಸೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net