

ಕಲಬುರಗಿ: ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಹಿಂದುಳಿದ ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ಶಿವಶರಣಪ್ಪ ಕುಂಬಾರ ಆಗ್ರಹಿಸಿದರು.
೨೦೨೩-ಮಾರ್ಚ್ನಲ್ಲಿ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದೆ. ಆದರೆ, ಇದುವರೆಗೆ ನಿಗಮಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಿಲ್ಲ. ಅನುದಾನವನ್ನು ಬಿಡುಗಡೆ ಮಾಡಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕುಂಬಾರರು ಅತಿ ಹಿಂದುಳಿದ ಸಣ್ಣ ಸಮುದಾಯವಾಗಿದೆ. ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಹಿಂದುಳಿದಿದೆ. ನಮ್ಮ ಬಗ್ಗೆ ಧ್ವನಿ ಎತ್ತುವವರು ಯಾರು ಇಲ್ಲದಂತಾಗಿದೆ. ಸಮುದಾಯದ ಹಲವು ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಅನೇಕ ಸಲ ಪ್ರತಿಭಟಿಸಿದರು ಇದುವರೆಗೂ ನಮ್ಮ ಬೇಡಿಕೆ ಈಡೇರಿಕೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ ರಾಜ್ಯ ಕುಂಬಾರ ಸಮುದಾಯದ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ, ಸೂಕ್ತ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರಭು ಕುಂಬಾರ, ಶರಣು ಕುಂಬಾರ, ಶರಣಪ್ಪ ಕುಂಬಾರ, ವಿಠ್ಠಲ್ ಕುಂಬಾರ, ನಾಗಪ್ಪ ಕುಂಬಾರ ಇತರರಿದ್ದರು.