ಕುಂಭಮೇಳಕ್ಕೆ ಸಿದ್ಧತೆ ಕೈಗೊಳ್ಳಿ

10_09_Mdy_03(Minister Kcn)
Published on

ಕೆ.ಆರ್.ಪೇಟೆ: ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಅ.13 ರಿಂದ 16ರವರೆಗೆ ಕುಂಭಮೇಳ ನಡೆಯಲಿದೆ. ಈ ನಾಲ್ಕು ದಿನದ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಸೂಚಿಸಿದರು.


ತಾಲೂಕಿನ ಅಂಬಿಗರಹಳ್ಳಿ ಸಮೀಪದಲ್ಲಿರುವ ಸಂಗಮಕ್ಕೆ ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ಬಳಿಕ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಸ್ವಾಮೀಜಿಗಳು ಹಾಗೂ ಇನ್ನಿತರ ಗಣ್ಯರು ಆಗಮಿಸಲಿದ್ದಾರೆ. ಆದ್ದರಿಂದ ಯಾವುದೇ ಕುಂದುಕೊರತೆಯಾಗದಂತೆ ಕಾರ್ಯನಿರ್ವಹಿಸಿ ಎಂದು ಹೇಳಿದರು.


ದೇವಸ್ಥಾನ ಅಭಿವೃದ್ಧಿ, ರಸ್ತೆ ಕಾಮಗಾರಿ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣ ಮಾಡಬೇಕು. ಧಾರ್ಮಿಕ ಕಾರ್ಯಕ್ರಮಗಳು ಹಿಂದಿನ ಪರಂಪರೆಯಂತೆ ನಡೆಯಬೇಕು. ಲೇಸರ್ ಶೋ, ವಿವಿಧ ಶೈಲಿಯ ದೀಪಾಲಂಕಾರ, ವಸ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ನಡೆಯಬೇಕು ಎಂದರು.


ಜಿಲ್ಲಾಧಿಕಾರಿ ಎಸ್.ಅಶ್ವಥಿ, ಎಡಿಸಿ ಡಾ.ಎಚ್.ಎಲ್.ನಾಗರಾಜು, ಜಿಪಂ ಸಿಇಒ ಶಾಂತಾ ಎಲ್.ಹುಲ್ಮನಿ, ಎಎಸ್ಪಿ ವೇಣುಗೋಪಾಲ್, ಜಿ.ಪಂ ಉಪಕಾರ್ಯದರ್ಶಿ ಸರಸ್ವತಿ, ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ತಹಸೀಲ್ದಾರ್ ಎಂ.ವಿ.ರೂಪಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net