

ಅರಕಲಗೂಡು: ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ನಿವಾಸಕ್ಕೆ ಜಿಲ್ಲಾಧಿಕಾರಿ ಲತಾ ಕುಮಾರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಗ್ರಾಮದ ರೈತ ಮಂಜೇಗೌಡ (45) ಅವರು ಸಾಲಬಾಧೆಯಿಂದ ಬೇಸತ್ತು ಜೂ.19ರಂದು ವಿಷ ಕುಡಿದು ಆತ್ಮಹತ್ಯೆಗೆ ಮುಂದಾಗಿದ್ದರಯ. ಕೂಡಲೇ ಅವರನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ನಿವಾಸಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಸರ್ಕಾರದ ನಿಯಮಾನುಸಾರ ಪರಿಹಾರ ದೊರಕಿಸಿಕೊಂಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಹಸೀಲ್ದಾರ್ ಸೌಮ್ಯಾ, ಗ್ರೇಡ್-2 ತಹಸೀಲ್ದಾರ್ ಸಿ.ಸ್ವಾಮಿ, ರಾಜಸ್ವ ನಿರೀಕ್ಷಕ ಭಾಸ್ಕರ್ ಇತರರಿದ್ದರು.