ಕುಟುಂಬ ರಾಜಕಾರಣಕ್ಕೆ ಬಿಜೆಪಿ ಸಿಲುಕಿದೆ

satish jarakiholi
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:ಹಿಂದೆಲ್ಲ ನೆಹರು, ಇಂದಿರಾ ಗಾಂಧಿ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿಯವರು ಟೀಕಿಸುತ್ತಿದ್ದರು. ಈಗ ಅವರೇ ಕುಟುಂಬ ರಾಜಕಾರಣಕ್ಕೆ ಸಿಲುಕಿದ್ದಾರೆ. ಬಿಜೆಪಿಯಲ್ಲಿ ಐದಾರು ಕುಟುಂಬಗಳು ರಾಜಕೀಯದಲ್ಲಿ ಸಕ್ರಿಯವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಕುಟುಂಬ ರಾಜಕಾರಣ ಇಂದು ಸ್ವಾಭಾವಿಕ ಎಂಬಂತಾಗಿದೆ. ಇದಕ್ಕೆಲ್ಲ ಏನೂ ಹೇಳಲು ಆಗುವುದಿಲ್ಲ. ನಾವೆಲ್ಲ ಮಾತನಾಡುವಾಗ ಇತಿ ಮಿತಿಯಲ್ಲಿ ಇರಬೇಕಾಗುತ್ತದೆ ಎಂದರು.

ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್​ನಲ್ಲಿ 15 ಜನ ಆಕಾಂಕ್ಷಿಗಳಿದ್ದರು. ಹಾಗಾಗಿ ಟಿಕೆಟ್ ಘೊಷಣೆ ಮಾಡುವಲ್ಲಿ ವಿಳಂಬವಾಗಿದೆ. ಈಗ ಅಲ್ಲಿ ಯಾಸೀರ್ ಖಾನ್ ಪಠಾಣ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಅಲ್ಲಿ ಅಭ್ಯರ್ಥಿ ಗೆಲುವಿಗೆ ಪಕ್ಷ ಕೆಲಸ ಮಾಡಬೇಕಿದೆ. ಗೆಲ್ಲುವ ಕುರಿತು ವರಿಷ್ಠರೆಲ್ಲರೂ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದರು.

ಕಳೆದ 25 ವರ್ಷಗಳಿಂದ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿಲ್ಲ. ಈ ಬಾರಿ ಗೆಲ್ಲುವ ಅವಕಾಶವಿದೆ. ಗೆಲ್ಲಲು ಶತ ಪ್ರಯತ್ನ ಮಾಡುತ್ತೇವೆ. ಅಜ್ಜಂಪೀರ ಖಾದ್ರಿ ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಗೊತ್ತಿಲ್ಲ. ರಾಜಕೀಯದಲ್ಲಿ ಬಂಡಾಯ ಸ್ವಾಭಾವಿಕ. ಹಾಗೇನಾದರೂ ಬಂಡಾಯವಿದಲ್ಲಿ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.</p><p>ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾವೆಲ್ಲ ಉಪ ಚುನಾವಣೆಗೆ ಸೀಮಿತರಾಗಿದ್ದೇವೆ ಎಂದು ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net