ಕುಟುಂಬಸ್ಥರ ಜತೆ ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬೆ ದರ್ಶನ ಪಡೆದ ಇಂಧನ ಸಚಿವ ವಿ.ಸುನೀಲ್‌ಕುಮಾರ್: ದೇವಿಗೆ ವಿಶೇಷ ಪೂಜೆ

SORRRRRRR EEEWWWEB
Published on

ಸೊರಬ: ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಸ್ಥಾನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವ ವಿ.ಸುನೀಲ್‌ಕುಮಾರ್ ಕುಟುಂಬಸ್ಥರೊಂದಿಗೆ ಗುರುವಾರ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಚಿವರು ಕೊಡಕಣಿ ಗ್ರಾಮದ ಶ್ರೀರಾಮ ಮತ್ತು ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಿಂದ ಬೆಳೆಗಳಿಗೆ ತೊಂದರೆಯಾಗುತ್ತಿದೆ. ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಬೆನ್ನೂರು ಗ್ರಾಪಂ ಅಧ್ಯಕ್ಷ ದೇವರಾಜ್ ಸಚಿವರಿಗೆ ಮನವಿ ಮಾಡಿದರು.

ನಿರಂತರ ಜ್ಯೋತಿಗೆ ಹೆಚ್ಚುವರಿ ಅನುದಾನ: ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ತಲುಪದ ಕೆಲ ಮನೆ ಮತ್ತು ಗ್ರಾಮಗಳಿಗೆ ಅವಕಾಶ ಕಲ್ಪಿಸಲು ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಇಂಧನ ಸಚಿವ ವಿ. ಸುನೀಲ್‌ಕುಮಾರ್ ಹೇಳಿದರು. ರಾಜ್ಯದಲ್ಲಿ ಕೆಲ ವಿದ್ಯುತ್ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮತ್ತೆ ಕೆಲವೆಡೆ ಉನ್ನತೀಕರಣಗೊಳಿಸಲಾಗಿದೆ. ವಿದ್ಯುತ್ ಇಲಾಖೆಯಲ್ಲಿ ಹಲವಾರು ಸುಧಾರಣಾ ಕ್ರಮ ಕೈಗೊಳ್ಳಲಾಗಿದೆ. ಸಿಬ್ಬಂದಿ ಕೊರತೆ ಹಲವು ವರ್ಷಗಳಿಂದ ಇದ್ದು ಈಗಾಗಲೇ 1,800 ಸಿಬ್ಬಂದಿ ನೇಮಕ ಮಾಡಲಾಗಿದೆ. ಇನ್ನೂ 2,500 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಅವರನ್ನು ಸಹ ಎರಡನೇ ಹಂತದಲ್ಲಿ ನೇಮಕಾತಿ ಮಾಡಿಕೊಳ್ಳುವ ಮೂಲಕ ಸಿಬ್ಬಂದಿ ಕೊರತೆಯನ್ನು ನೀಗಿಸಲು ಯತ್ನಿಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net