ಕುಡಿಯುವ ನೀರನ್ನು ಕುದಿಸಿ ಆರಿಸಿ ಬಳಸಲು ಮನವಿ

Published on

ಚಾಮರಾಜನಗರ: ಅಮೃತ್-2.0ರ ಯೋಜನೆಯಡಿ ಗುಂಡ್ಲುಪೇಟೆ ಪಟ್ಟಣಕ್ಕೆ ಕಬಿನಿ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಯು ಪ್ರಗತಿಯಲ್ಲಿದ್ದು, ಪಟ್ಟಣ ವ್ಯಾಪ್ತಿಯ ಹಲವು ಬಡಾವಣೆಗಳಿಗೆ ಕಬಿನಿ ನದಿಯಿಂದ ಹೊಸ ಪೈಪ್‌ಲೈನ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ಪೈಪ್‌ಲೈನ್ ಮಾರ್ಗದಲ್ಲಿ ಸೋರಿಕೆ ಕಂಡು ಬಂದಲ್ಲಿ ಪುರಸಭೆ ಕಚೇರಿಗೆ ತುರ್ತಾಗಿ ಮಾಹಿತಿ ನೀಡಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನೀರನ್ನು ಕುದಿಸಿ ಆರಿಸಿ ಬಳಸುವಂತೆ ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net