ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ

Protest
Published on

ಚಿತ್ರದುರ್ಗ: ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಪಂ ಕಚೇರಿಗೆ ಬೀಗ ಹಾಕಿ ಗ್ರಾಮದ ಎಸ್ಸಿ ಕಾಲನಿಯ ಜನರು ಬುಧವಾರ ಪ್ರತಿಭಟನೆ ನಡೆಸಿದರು.

ಖಾಲಿ ಕೊಡ ಪ್ರದರ್ಶಿಸುವ ಮೂಲಕ ಪಿಡಿಒ ಸೇರಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ನೀರು ಸರಬರಾಜು ವಿಚಾರವಾಗಿ ಕ್ರಮ ಕೈಗೊಳ್ಳದಿದ್ದರೆ, ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಸಿದರು.

ಕಳೆದ ಹತ್ತದಿನೈದು ದಿನಗಳಿಂದಲೂ ಕುಡಿಯುವ ನೀರಿಲ್ಲದೆ, ತೊಂದರೆ ಅನುಭವಿಸುತ್ತಿದ್ದೇವೆ. ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು ಪ್ರಯೋಜನವಾಗಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಧಾವಿಸುತ್ತಿಲ್ಲ, ಸಮಸ್ಯೆ ಆಲಿಸುತ್ತಿಲ್ಲ ಎಂದು ದೂರಿದರು.

ಯುಗಾದಿ ಹಬ್ಬಕ್ಕೂ ನೀರಿಲ್ಲದಂತಾಗಿದೆ. ಸಾಮಾನ್ಯ ಜನರ ಕುರಿತು ಆಡಳಿತ ನಡೆಸುವವರು ನಿರ್ಲಕ್ಷೃ ಧೋರಣೆ ಅನುಸರಿಸುತ್ತಿದ್ದಾರೆ. ನೀರು ಪೂರೈಕೆಗೆ ಜಿಲ್ಲಾಡಳಿತ ಕ್ರಮವಹಿಸಬೇಕು ಎಂದು ಕೋರಿದರು.

ಮುಖಂಡರಾದ ಮಂಜುನಾಥ್, ಶಿವಪ್ಪ, ಮಹದೇವಪ್ಪ, ಅಜ್ಜಪ್ಪ, ಸಿದ್ದೇಶ, ಶಿವಪ್ಪ, ಭಾಗ್ಯಮ್ಮ, ರತ್ನಮ್ಮ, ಶರಣಮ್ಮ, ಅನಸೂಯಮ್ಮ, ಶಂಕರಮ್ಮ, ಮೀನಾಕ್ಷಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net