

ಚಾಮರಾಜನಗರ : ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಸೂಚಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿಗೃಹದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಬಹುತೇಕ ಗ್ರಾಮಗಳು ಕಾಡಂಚಿನಲ್ಲಿದ್ದು, ಕೆಲವು ಗ್ರಾಮಗಳಲ್ಲಿ ಮೂಲ ಸೌಕರ್ಯದ ಕೊರತೆ ಇದೆ. ಹಾಗಾಗಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಸಮಸ್ಯೆಗಳನ್ನು ಪಟ್ಟಿ ಮಾಡಬೇಕು. ಆ ಮೂಲಕ ಸಮಸ್ಯೆ ಬಗೆಹರಿಸುವುದಕ್ಕೆ ಮುಂದಾಗಬೇಕು ಎಂದು ನಿರ್ದೇಶಿಸಿದರು.
ಪಿಡಿಒಗಳಾದ ಮಹದೇವಸ್ವಾಮಿ, ನಾಗರಾಜಮೂರ್ತಿ, ನಂಜುಂಡಸ್ವಾಮಿ, ಮಾದೇಶ್, ರಘನಾಥ್, ಸುರೇಶ್, ರಾಮು, ರಾಜು ಇತರರು ಇದ್ದರು.