ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾವಹಿಸಲು ಡಿಸಿ ಸೂಚನೆ

ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾವಹಿಸಲು ಡಿಸಿ ಸೂಚನೆ
Published on

ಹಾಸನ: ಬರಗಾಲದ ಹಿನ್ನಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಇದ್ದಾರೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ಕುಡಿಯುವ ನೀರು ಪೂರೈಕೆ ಮಾಡಿ ನಂತರ ಪ್ರತಿ 15 ದಿನಕ್ಕೊಮ್ಮೆ ಬಿಲ್ ಅನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿ ಎಸ್.ಡಿ.ಆರ್.ಎಫ್.ನಡಿ ಹಣ ಪಾವತಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾವಹಿಸಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಲು ಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಾನುವಾರುಗಳಿಗೆ ಹಾಲಿ ಇರುವ ಮೇವು 35 ವಾರಗಳಿಗಾಗುತ್ತದೆ ಮುಂದೆಯೂ ಮೇವಿಗೆ ಕೊರತೆಯಾಗದಂತೆ ನಿಗಾವಹಿಸಿ, 38.7 ಕೋಟಿ ರೂಗಳು ಬೆಳೆ ಪರಿಹಾರವನ್ನು ಡಿ.ಬಿ.ಟಿ. ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಫಲಾನುಭವಿಗಳ ಪಟ್ಟಿ ಪ್ರಕಟ ಮಾಡಲು ತಿಳಿಸಿದರು.
ಪ್ರತಿ ತಾಲೂಕಿನಲ್ಲಿ ಕಂಟ್ರೋಲ್ ರೂಂ ತೆರೆದು ನಿರಂತರವಾಗಿ ಕರ್ತವ್ಯ ನಿರ್ವಹಿಸುವಂತೆ ಎಚ್ಚರವಹಿಸಿ ಎಂದ ಅವರು ಬಂದಂತಹ ಕರೆಗಳ ಬಗ್ಗೆ ಒಂದು ರಿಜಿಸ್ಟರ್ ನಲ್ಲಿ ದಾಖಲಿಸಲು ಕ್ರಮವಹಿಸುವುದರ ಜೊತೆಗೆ ವಾರಕ್ಕೊಮ್ಮೆ ಪರಿಶೀಲನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಜಂಟಿ ಕೃಷಿ ನಿರ್ದೇಶಕ ರಾಜಸುಲೋಚನ, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ.,ರಮೇಶ್ ಹಾಗೂ ವಿವಿಧ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net